ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿಗೆ 5 ದಿನ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು (ಜೂ.23): ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿಗೆ 5 ದಿನ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಚುಮು ಚುಮು ಚಳಿಯಾಗುತ್ತಿದ್ದು, ಸಂಜೆ ವೇಳೆಗೆ ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಕೊಡಗು, ಶಿವಮೊಗ್ಗ, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30-45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಅಲ್ಲದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಇನ್ನು 23 ರಿಂದ 27 ರವರೆಗೆ ಮಳೆ ಮುಂದುವರೆಯಲಿದೆ.
ಕರಾವಳಿಯಲ್ಲಿ ಚುರುಕಾಗದ ಮುಂಗಾರು: ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಮಳೆ ಇನ್ನೂ ಚುರುಕು ಪಡೆದಿಲ್ಲ. ಈ ನಡುವೆ ಭಾರತೀಯ ಹವಾಮಾನ ಇಲಾಖೆ ಜೂ.23ರಿಂದ 27ರ ವರೆಗೆ ಕರಾವಳಿಯಲ್ಲಿ ಯೆಲ್ಲೋ ಅಲರ್ಚ್ ಘೋಷಿಸಿದೆ. ದ.ಕ. ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ತುಂತುರು ಮಳೆ, ಬಳಿಕ ಬಿಸಿಲು, ಸಂಜೆ ವೇಳೆ ಮತ್ತೆ ಮೋಡ, ತುಂತುರು ಮಳೆ ಕಾಣಿಸಿದೆ. ಮುಂಗಾರು ಮಳೆ ಇನ್ನೂ ಕರಾವಳಿಯಲ್ಲಿ ವೇಗ ಪಡೆದಿಲ್ಲ. ಆದರೂ ಜಿಲ್ಲೆಯಲ್ಲಿ ಮಳೆಗಾಲದ ವಾತಾವರಣ ಕಂಡುಬಂದಿದೆ. ಮಂಗಳೂರಿನಲ್ಲಿ ದಿನವಿಡೀ ಬಿಸಿಲು, ಮೋಡದ ವಾತಾವರಣ ಕಂಡುಬಂದಿದೆ. ಸಂಜೆ ವೇಳೆಗೆ ಮೋಡ ಇದ್ದು ಅಲ್ಲಲ್ಲಿ ತುಂತುರು ಮಳೆ ಹನಿದಿದೆ. ಗುರುವಾರ ಬೆಳಗ್ಗಿನ ವರೆಗೆ ಮಂಗಳೂರಲ್ಲಿ 7.9 ಮಿಲಿ ಮೀಟರ್, ಬಂಟ್ವಾಳ 20.1 ಮಿ.ಮೀ, ಬೆಳ್ತಂಗಡಿ 22.3 ಮಿ.ಮೀ, ಪುತ್ತೂರು 6 ಮಿ.ಮೀ, ಕಡಬ 11.7 ಮಿ.ಮೀ, ಸುಳ್ಯ 17.5 ಮಿ.ಮೀ. ಮಳೆ ದಾಖಲಾಗಿದೆ. ಜಿಲ್ಲೆಯ ದಿನದ ಸರಾಸರಿ ಮಳೆ 14.3 ಮಿ.ಮೀ. ಆಗಿದೆ.
ಇನ್ನೊಂದು ವಾರದಲ್ಲಿ 3500 ಪೊಲೀಸ್ ಕಾನ್‌ಸ್ಟೇಬಲ್ ನೇಮಕ: ಸಚಿವ ಪರಮೇಶ್ವರ್
ಕೊಡಗಿನಲ್ಲಿ ಚುರುಕುಗೊಂಡ ಮುಂಗಾರು: ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಗುರುವಾರ ಮಧ್ಯಾಹ್ನ ಕೆಲ ಕಾಲ ಉತ್ತಮ ಮಳೆಯಾಯಿತು. ಜಿಲ್ಲೆಯ ವಿವಿಧ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂತು. ಮಡಿಕೇರಿಯಲ್ಲಿ ಸುರಿದ ಮಳೆಯಿಂದ ಮುಂಗಾರು ಚುರುಕುಗೊಂಡ ಲಕ್ಷಣ ಕಂಡುಬಂತು. ಆದರೆ ಸಂಜೆ ವೇಳೆಗೆ ಮಳೆ ಕಡಿಮೆಯಾಯಿತು. ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 9.48 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.11 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 238.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 540.18 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.27 ಮಿ.ಮೀ. ಕಳೆದ ವರ್ಷ ಇದೇ ದಿನ 21.53 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 338.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 726.06 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.14 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 187.87 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 459.20 ಮಿ.ಮೀ. ಮಳೆಯಾಗಿತ್ತು.
ಕೇಂದ್ರದ 5 ಕೆಜಿ ಸೇರಿಸಿ 15 ಕೆಜಿ ಅಕ್ಕಿ ನೀಡಲು ನಾವು ಸಿದ್ಧ: ಸಚಿವ ಆರ್.ಬಿ.ತಿಮ್ಮಾಪುರ
ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.03 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 10.77 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 189.76 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 435.27 ಮಿ.ಮೀ. ಮಳೆಯಾಗಿತ್ತು. ಮಡಿಕೇರಿ ಕಸಬಾ 4.60, ಸಂಪಾಜೆ 18.50, ಭಾಗಮಂಡಲ 6, ವಿರಾಜಪೇಟೆ ಕಸಬಾ 45.20, ಹುದಿಕೇರಿ 10.70, ಶ್ರೀಮಂಗಲ 5.20, ಪೊನ್ನಂಪೇಟೆ 6, ಅಮ್ಮತ್ತಿ 5.50, ಬಾಳೆಲೆ 0.25, ಸೋಮವಾರಪೇಟೆ ಕಸಬಾ 4.20, ಶನಿವಾರಸಂತೆ 7, ಶಾಂತಳ್ಳಿ 37, ಕೊಡ್ಲಿಪೇಟೆ 4, ಕುಶಾಲನಗರ 1, ಸುಂಟಿಕೊಪ್ಪ 1 ಮಿ.ಮೀ. ಮಳೆಯಾಗಿದೆ.