ಭಾರಿ ಮಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಸಮುದ್ರ ತೀರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಾರಿ ಮಳೆ ಕಾರಣ 2 ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ.
ಬೆಂಗಳೂರು (ಜು.25) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಉತ್ತರ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಕೆಲ ಜಿಲ್ಲೆಗಳು ಹಾೂ ತಾಲೂಕುಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆ ಕಾರಣದಿಂದ ರಾಜ್ಯದ 2 ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲಾ ಕಾಲೇಜಿಗೆ ಶುಕ್ರವಾರ (ಜು.26) ರಜೆ ಘೋಷಿಸಲಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಮೀನುಗಾರಿಕೆ ನಡೆಸದಂತೆ ಸೂಚಿಸಲಾಗಿದೆ.
ಕೊಡುಗು ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ
ಕೊಡಗು ಜಿಲ್ಲೆಯಲ್ಲಿ ಭಾರಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರ (ಜು.26) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಾಕಷ್ಟು ಕಡೆಗಳಲ್ಲಿ ರಸ್ತೆಗಳಿಗೆ ಮರಗಳು ಉರುಳುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಜೆ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ರಜೆ ಘೋಷಣೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಭಾರಿ ಮಳೆ ಕಾರಣ ನಾಳೆ (ಜು.26) ಕ್ಕೆ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಏಳು ತಾಲೂಕಿನ ಅಂಗನವಾಡಿ, ಶಾಲಾ- ಕಾಲೇಜಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ ಹಾಗೂ ಜೊಯಿಡಾ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದೆ. ನದಿ ಪಾತ್ರದ ಜನರನ್ನು ಸ್ಥಳಾಂತರ ಮಾಡಲಾಗಿದೆ. ಹಲೆವೆಡೆ ಗುಡ್ಡ ಕುಸಿತ ಭೀತಿ ಎದುರಾಗಿದೆ. ಹೊನ್ನಾವರ ಹಾಗೂ ಕುಮಟ ಸೇರಿ ಒಟ್ಟು 6 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇನ್ನೆರಡು ದಿನ ಭಾರೀ ಮಳೆ ಎಚ್ಚರಿಕೆ
ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿರುವ ಕಾರಣ ಹಲವು ಭಾಗದಲ್ಲಿ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆ ಇಂದು ಹಾಗೂ ನಾಳೆ 45 ರಿಂದ 50 ಕಿಲೋಮೀ ವೇಗದಲ್ಲಿ ಗಾಳಿ ಹಾಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ಹೀಗಾಗಿ ಕಡಲ ತೀರ, ನದಿ ತೀರದ ಜನರಿಗೆ ಮುನ್ನಚ್ಚರಿಕೆ ಸೂಚನೆ ನೀಡಲಾಗಿದೆ. ಮೀನುಗಾರಿಗೆ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಉಡುಪಿ ಜಿಲ್ಲೆಯ ನದಿಗಳು ಅಪಾಯದ ಮಟ್ಟ ಮೀರಿದೆ. ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಹಲವರನ್ನು ಸ್ಥಳಾಂತರವಾಗಲ ಸೂಚಿಸಿದೆ.
