ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಳೆ ಮುಂದವರಿದಿದ್ದು, ಇಂದು ಸಂಜೆ ನಗರದಲ್ಲಿ ಸುರಿದ ಭಾರೀ ಮಳೆಯಿಂದ ಆಟೋ ಮೇಲೆ ಬೃಹತ್ ಮರವೊಂದು ಉರುಳಿಬಿದ್ದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು (ಆ.16): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಳೆ ಮುಂದವರಿದಿದ್ದು, ಇಂದು ಸಂಜೆ ನಗರದಲ್ಲಿ ಸುರಿದ ಭಾರೀ ಮಳೆಯಿಂದ ಆಟೋ ಮೇಲೆ ಬೃಹತ್ ಮರವೊಂದು ಉರುಳಿಬಿದ್ದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಜಯನಗರದ ಎಂಸಿ ಲೇಔಟ್‌ನಲ್ಲಿ ನಡೆದ ಘಟನೆ. ಇಬ್ಬರು ಪ್ರಯಾಣಿಕರನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ಮೇಲೆ ಬಿದ್ದ ಮರ. ಮರ ಬಿದ್ದಿರೋ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ, ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮೂವರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ

ಘಟನಾ ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಗೆ ಬಿದ್ದಿರುವ ಬೃಹತ್ ಮರ ತೆರವುಗೊಳಿಸುತ್ತಿರುವ ಸಿಬ್ಬಂದಿ.

ಬೆಂಗಳೂರು: ನೀರು ನುಗ್ಗಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಸುಟ್ಟು ಭಸ್ಮ..!

ಕಳೆದೆರಡು ದಿನಗಳಿಂದ ಹೊರಪು ಆಗಿದ್ದ ಮತ್ತೆ ಇಂದಿನಿಂದ ಮುಂದುವರಿದಿರುವ ಮಳೆ. ಮೆಜೆಸ್ಟಿಕ್, ವಿಜಯನಗರ, ಯಶವಂತಪುರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಮಳೆಯಿಂದಾಗ ಹಲವೆಡೆ ಬೃಹತ್ ಮರಗಳು ಉರುಳಿಬಿದ್ದಿವೆ. ಏಕಾಏಕಿ ಸುರಿದ ಭಾರೀ ಮಳೆ ವಾಹನ ಪ್ರಯಾಣಿಕರು ಪರದಾಡಿದರು.