ರಾಜ್ಯದಲ್ಲಿ ಕೊರೋನಾ ಸೋಂಕು ಗಣನೀಯ ಇಳಿಕೆ: ಪಾಸಿಟಿವಿಟಿ ದರ ಕೇವಲ ಶೇ. 3.8

* ಕರ್ನಾಟಕದಲ್ಲಿ ತಗ್ಗಿದ ಕೊರೋನಾ ಸೋಂಕಿನ ಪ್ರಮಾಣ
* ಕೊರೋನಾ ಪಾಸಿಟಿವಿಟಿ ದರ ಶೇ. 3.8ಕ್ಕೆ ಕುಸಿತ
* ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ

Karnataka Records  5041Covid Cases and 115 deaths on 15 June 2021 rbj

ಬೆಂಗಳೂರು, (ಜೂನ್.15): ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡು ತಿಂಗಳ ಬಳಿಕ ಕಡಿಮೆ ಸೋಂಕಿನ ಸಂಖ್ಯೆ ವದರಿಯಾಗಿದೆ.

ಹೌದು...ರಾಜ್ಯದಲ್ಲಿ ಇಂದು (ಮಂಗಳವಾರ) 1.32 ಲಕ್ಷ ಜನರಿಗೆ ಕೊರೋನಾ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ 5041ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2777010. 

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ: ಪಾಸಿಟಿವಿಟಿ ದರ ಶೇಕಡ 5ಕ್ಕಿಂತ ಕಡಿಮೆ

ಕಳೆದ 24 ಗಂಟೆಗಳಲ್ಲಿ 14785 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಈವರೆಗೆ ರಾಜ್ಯದಲ್ಲಿ ಒಟ್ಟು 2581559 ಜನರು ಡಿಸ್ಚಾರ್ಜ್ ಆಗಿದ್ದು, ಸದ್ಯ 162282 ಸಕ್ರಿಯ ಕೇಸ್‌ಗಳಿವೆ.

ಮಂಗಳವಾರ  115 ಜನರು ಕೊರೋನಾ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಒಟ್ಟ 33148 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಇನ್ನು ಕೊರೋನಾ ಹಾಟ್‌ಸ್ಪಾಟ್ ಆಗಿದ್ದ ರಾಜಧಾನಿ ಬೆಂಗಳೂರಿನಲ್ಲಿ ಕೇವಲ ಸೋಂಕಿತರ ಸಂಖ್ಯೆ 1000ಕ್ಕೆ ಇಳಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ. 3.8ಕ್ಕೆ ಕುಸಿದಿದೆ.

Latest Videos
Follow Us:
Download App:
  • android
  • ios