ಬೆಂಗಳೂರು, (ಜುಲೈ.05): ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ 1,925 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 38 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

 1925 ಪ್ರಕರಣಗಳೊಂದಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 23474 ಕ್ಕೆ ಏರಿಕೆಯಾಗಿದೆ. ಭಾನುವಾರ 38 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 373ಕ್ಕೆ ಏರಿಕೆಯಾಗಿದೆ. 

ಕೊರೋನಾ ಸೋಂಕಿನ ಅಬ್ಬರ: ದೇಶದಲ್ಲೀಗ ಕರ್ನಾಟಕ ನಂ.7 ರಾಜ್ಯ! 

ಒಟ್ಟಾರೆ 23,474 ಪ್ರಕರಣಗಳ ಪೈಕಿ 9,847 ಮಂದಿ ಡಿಸ್ಚಾರ್ಜ್ ಆಗಿದ್ದು 13,250 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾವಾರು ಅಂಕಿ-ಅಂಶ
ಬೆಂಗಳೂರು1235, ದಕ್ಷಿಣ ಕನ್ನಡ 147, ಬಳ್ಳಾರಿ 90, ವಿಜಯಪುರ 51, ಕಲಬುರಗಿ 49, ಉಡುಪಿ 45, ಧಾರವಾಡ 45, ಬೀದರ್ 29, ಮೈಸೂರು 25, ಕೊಪ್ಪಳ 22, ಉತ್ತರ ಕನ್ನಡ 21, ಚಾಮರಾಜನಗರ 19, ಹಾವೇರಿ 15, ಹಾಸನ 14, ಚಿಕ್ಕಬಳ್ಳಾಪು 15, ತುಮಕೂರು 15, ಕೋಲಾರ 13, ಬೆಳಗಾವಿ 11, ದಾವಣಗೆರೆ 11 ರಾಯಚೂರು ಹಾಗೂ ಮಂಡ್ಯದಲ್ಲಿ 10, ಚಿಕ್ಕಮಗಳೂರು 9, ಶಿವಮೊಗ್ಗ 8, ಗದಗ 7, ರಾಮನಗರ 6, ಬಾಗಲಕೋಟೆ 4,ಚಿತ್ರದುರ್ಗ 03  ಕೊರೋನಾ ವೈರಸ್ ಪ್ರಕರಣಗಳುಪತ್ತೆಯಾಗಿವೆ.