ಬೆಂಗಳೂರು[ಜ.28]: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಲಿಯಾದರೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಾ ಹುಲಿ. ಅವರಿಗೆ ಉತ್ತಮ ಆಡಳಿತ ನಡೆಸುವುದು ಹೇಗೆ ಎಂಬುದು ಗೊತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತೀಕ್ಷ್ಣವಾಗಿ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರಮಾಧಿಕಾರ ನೀಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯಾಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಉಪಚುನಾವಣೆ ಯಲ್ಲಿ ಗೆಲುವು ಸಾಧಿಸಿದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಉಳಿದದ್ದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.

ಬಿಜೆಪಿ ಸಹವಾಸ ಮಾಡಿದವರು ಯಾರೂ ಅತಂತ್ರರಾಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಅತಂತ್ರವಾಗಿದ್ದಾರೆ ಎಂದರು.