ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2024-25ನೇ ಸಾಲಿನಲ್ಲಿ ಮೂರು ದಿನಗಳ ತರಬೇತಿ ಶಿಬಿರವನ್ನು ಫೆ.28 ರಿಂದ ಮಾ.2ರವರೆಗೆ ಮೈಸೂರಿನಲ್ಲಿ ಹಮ್ಮಿಕೊಂಡಿದೆ. 21 ರಿಂದ 40 ವರ್ಷದೊಳಗಿನವರು ಫೆಬ್ರವರಿ 14ರೊಳಗೆ ಅರ್ಜಿ ಸಲ್ಲಿಸಬಹುದು.

ಬೆಂಗಳೂರು (ಫೆ.07): ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅಕಾಡೆಮಿ ಅಧ್ಯಕ್ಷರಾದ ಶುಭ ಧನಂಜಯ ಅವರ ಅಧ್ಯಕ್ಷತೆಯಲ್ಲಿ ಸಂಗೀತ ನೃತ್ಯ ಕಲೆಯ ಬಗ್ಗೆ ಉನ್ನತ ಮಟ್ಟದ ತಿಳುವಳಿಕೆಯುಳ್ಳವರಿಗಾಗಿ ಭರತನಾಟ್ಯ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಮತ್ತು ಗಮಕ ಕಲಾ ಪ್ರಕಾರಗಳ ಕುರಿತು 2024-25ನೇ ಸಾಲಿನಲ್ಲಿ ಮೂರು ದಿನಗಳ ತರಬೇತಿ ಶಿಬಿರವನ್ನು 2025ರ ಫೆ.28 ರಿಂದ ಮಾ.2ರವರೆಗೆ ಮೂರು ದಿನಗಳ ಕಾಲ ಮೈಸೂರಿನ ಕಲಾಮಂದಿರದಲ್ಲಿ ಹಮ್ಮಿಕೊಂಡಿದೆ. ಶಿಬಿರಾರ್ಥಿಗಳಿಂದ ಪ್ರದರ್ಶನ ಕಾರ್ಯಕ್ರಮವು ಮಾ.3 ರಂದು ನಡೆಯಲಿದೆ.

ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳವವರು 21 ರಿಂದ 40 ವರ್ಷದ ವಯೋಮಿತಿ ಒಳಗಾಗಿರಬೇಕು, ಸೀನಿಯರ್ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆ ಆಗಿರಬೇಕು. ನೃತ್ಯ ಗುರುಗಳು, ಶಿಕ್ಷಕರು, ಸಂಗೀತ ನೃತ್ಯ ಅಭ್ಯರ್ಥಿಗಳು ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದೆ. ಓ.ಓ.ಡಿ.ಪತ್ರ ನೀಡಲಾಗುವುದು. ತರಬೇತಿ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಅಕಾಡೆಮಿ ವತಿಯಿಂದ ವಸತಿ, ಊಟದ ವ್ಯವಸ್ಥೆ ಹಾಗೂ ಪ್ರಮಾಣ ಪತ್ರ ನೀಡಲಾಗುವುದು. 

ತರಬೇತಿ ಶಿಬಿರದಲ್ಲಿ ಭಾಗವಹಿಸಲಿಚ್ಚಿಸುವವರು ತಮ್ಮ ಹೆಸರು, ವಿಳಾಸ, ಮೊಬೈಲ್ ನಂಬರ್, ಕಲಾ ಪ್ರಕಾರ, ಸೀನಿಯರ್ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣ ಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ ಹಾಗೂ ಸಂಕ್ಷಿಪ್ತ ಪರಿಚಯದೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು -2 ಇಲ್ಲಿಗೆ ಅಥವಾ ಅಕಾಡೆಮಿ ವೆಬ್ ಸೈಟ್: karnatakasangeeta@gmail.com ಮೂಲಕ ಫೆಬ್ರವರಿ 14ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-2 ಅಥವಾ ದೂರವಾಣಿ ಸಂಖ್ಯೆ:080-22215072 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ರಿಜಿಸ್ಟ್ರಾರ್ ಎನ್.ನರೇಂದ್ರಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.