ಕೇಂದ್ರದ ಸೂಚನೆ ನಂತ್ರ ಶಾಲೆ ಆರಂಭದ ಬಗ್ಗೆ ನಿರ್ಧಾರ: ಸಚಿವ ಸುರೇಶ್
ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ತರಗತಿಗಳ ಪ್ರಾರಂಭದ ದಿನಾಂಕವನ್ನು ಮುಂದಿನ ವಾರದಲ್ಲಿ ನಿರ್ಧರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು(ಮೇ 23): ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ತರಗತಿಗಳ ಪ್ರಾರಂಭದ ದಿನಾಂಕವನ್ನು ಮುಂದಿನ ವಾರದಲ್ಲಿ ನಿರ್ಧರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ಆಕಾಶವಾಣಿ ಸಂದರ್ಶನದಲ್ಲಿ ಶುಕ್ರವಾರ ಮಾತನಾಡಿದ ಅವರು, ಲಾಕ್‌ಡೌನ್ ಜಾರಿಯಲ್ಲಿರುವಾಗಲೇ ತರಗತಿಗಳನ್ನು ಆರಂಭಿಸಬಾರದು ಎಂದು ಪೋಷಕರ ಒತ್ತಡವಿದೆ. ಹೀಗಾಗಿ ಎಲ್ಲಾ ಆಯಾಮಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಕೇಂದ್ರದ ಮಾರ್ಗಸೂಚಿ ಪ್ರಕಟವಾದ ಬಳಿಕ ರಾಜ್ಯದಲ್ಲಿ ಶಾಲೆ ಪುನಾರಂಭಿಸುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.
ಕಂಟೈನ್ಮೆಂಟ್ ವಲಯಗಳಲ್ಲಿ ಪರೀಕ್ಷೆ ಇಲ್ಲ:
ಜೂ.25ರಿಂದ ಆರಂಭವಾಗುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕಂಟೈನ್ಮೆಂಟ್ ವಲಯಗಳಲ್ಲಿ ನಡೆಸುವುದಿಲ್ಲ. ಪರೀಕ್ಷೆ ನಡೆಯುವ ದಿನದ ಆಸುಪಾಸಿನಲ್ಲಿ ಕಂಟೈನ್ಮೆಂಟ್ ವಲಯವೆಂದು ಘೋಷಣೆಯಾದರೆ ಆಗ ಆ ಭಾಗದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅಂಫಾನ್‌ಗೆ ನಲುಗಿದ ಬಂಗಾಳ, ಒಡಿಶಾಕ್ಕೆ ಮೋದಿ 1500 ಕೋಟಿ ಪ್ಯಾಕೇಜ್
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ (ಎಂಎಚ್‌ಆರ್‌ಡಿ) ಮಾರ್ಗಸೂಚಿ ಆಧಾರದಲ್ಲಿ ಶಾಲೆಗಳನ್ನು ಪುನಾರಂಭಿಸಬೇಕಾಗುತ್ತದೆ. ಹೀಗಾಗಿ ಸಾಮಾನ್ಯವಾಗಿ ಪೂರಕ ಪರೀಕ್ಷೆಗಳ ವಿದ್ಯಾರ್ಥಿಗಳನ್ನು ಪುನರಾವರ್ತಿತ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುತ್ತದೆ. ಆದರೆ, ಕಂಟೈನ್ಮೆಂಟ್ ವಲಯದ ವಿದ್ಯಾರ್ಥಿಗಳನ್ನು ಹೊಸ ವಿದ್ಯಾರ್ಥಿಗಳೆಂದೇ ಪರಿಗಣಿಸಿ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದರು.
ಕೆಪಿಸಿಸಿ ಅಧ್ಯಕ್ಷರಾಗಿ ಜೂ.7ರಂದು ಡಿಕೆಶಿ ಅಧಿಕಾರ ಸ್ವೀಕಾರ..?
ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆಯೇ ಹೊರತು ಅದು ಯಾರೊಬ್ಬರ ಪ್ರತಿಷ್ಠೆಯಾಗಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮುಂದಿನ ವ್ಯಾಸಂಗಕ್ಕೆ ಪ್ರಮುಖ ತಿರುವಾಗಿದೆ ಮತ್ತು ಪ್ರಮುಖ ಮಾನದಂಡವಾಗಿರುವುದರಿಂದ ಪರೀಕ್ಷೆ ನಡೆಸಬೇಕಾಗಿದೆ. ರಾಜ್ಯದ ಬಹುಪಾಲು ವಿದ್ಯಾರ್ಥಿಗಳ ಅಭಿಪ್ರಾಯ ಕೂಡ ಪರೀಕ್ಷೆ ನಡೆಸಬೇಕು ಎಂದಿದೆ ಎಂದು ಹೇಳಿದರು.