Asianet Suvarna News Asianet Suvarna News

ಭಾರತಕ್ಕೆ ಕೊರೋನಾ ಕಾಲಿಟ್ಟು ಇಂದಿಗೆ 1 ವರ್ಷ, ಇಲ್ಲಿದೆ ಕರ್ನಾಟಕದ ಅಂಕಿ-ಸಂಖ್ಯೆ

ಕರ್ನಾಟಕದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದೆ. ಹೊಸ ಪಾಸಿಟಿವ್ ಕೇಸ್ ಹಾಗೂ ಸಾವಿನ ಪ್ರಮಾಣದಲ್ಲಿ ಇಳಿಮುಖವಾಗಿದೆ.

Karnataka sees 464 new Covid-19 cases, 2 deaths On Jan 30 rbj
Author
Bengaluru, First Published Jan 30, 2021, 9:54 PM IST

ಬೆಂಗಳೂರು, (ಜ.30): ರಾಜ್ಯದಲ್ಲಿ ಇಂದು (ಶನಿವಾರ) ಹೊಸದಾಗಿ 464 ಜನರಿಗೆ ಕೊರೋನಾ ಸೋಂಕು ತಗಲಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಇದುವರೆಗೆ 12,213 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,38,865 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕೊರೊನಾ ಭಾರತಕ್ಕೆ ಕಾಲಿಟ್ಟು ಇಂದಿಗೆ 1 ವರ್ಷ!

ಬೆಂಗಳೂರಿನಲ್ಲಿ ಶನಿವಾರ 233 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,98,644ಕ್ಕೇರಿದ್ದು, ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 547 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,20,657ಕ್ಕೆ ಏರಿಕೆಯಾಗಿದೆ. ಇದರೊಂದಿಗೆ 5,976 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 147 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಕೊರೊನಾ ಮಹಾಮಾರಿ ಆರಂಭವಾಗಿ ಇಂದಿಗೆ ಒಂದು ವರ್ಷ ತುಂಬಿದೆ. 2020 ಜ. 30 ರಂದು ಕೇರಳದ ತ್ರಿಶ್ಯೂರ್‌ನಲ್ಲಿ ಮೊದಲ ಕೋವಿಡ್ ಕೇಸ್ ದಾಖಲಾಗಿತ್ತು. ಅಂದಿನಿಂದ ಆರಂಭವಾದ ಕೊರೊನಾ ಪ್ರಕರಣ ಒಂದು ವರ್ಷದಲ್ಲಿ 1.07 ಕೋಟಿ ಗಡಿ ದಾಟಿದೆ.

Follow Us:
Download App:
  • android
  • ios