ಕರ್ನಾಟಕದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಹಾಗಾದ್ರೆ, ಫೆ.6 ಕೊರೋನಾ ಸಂಖ್ಯೆ ಎಷ್ಟು.? ಎನ್ನುವ ಅಂಕಿ-ಸಂಖ್ಯೆ ಇಲ್ಲಿದೆ.

ಬೆಂಗಳೂರು, (ಫೆ.06):  ರಾಜ್ಯದಲ್ಲಿ ಇಂದು (ಶನಿವಾರ) 531 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,42,031ಕ್ಕೆ ಏರಿಕೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,233ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕೊರೋನಾ ನಿಯಂತ್ರಣಕ್ಕೆ ಭಾರತದ ಸಿಂಪಲ್ ಟೆಕ್ನಿಕ್ಸ್: ಭೇಷ್ ಎಂದ WHO

ಬೆಂಗಳೂರಿನಲ್ಲಿ ಶನಿವಾರ 318 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,00,315ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 434 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,23,811ಕ್ಕೆ ಏರಿಕೆಯಾಗಿದೆ. 

ಇದೊಂದಿಗೆ 5,968 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 144 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.