ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ SSLC ಹಾಗೂ ದ್ವಿತೀಯ PU ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸಾರ್ವಜನಿಕರು ಮಂಡಳಿಯ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿಯನ್ನು ವೀಕ್ಷಿಸಿ, ಅಕ್ಟೋಬರ್ 9, 2025ರೊಳಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

ಬೆಂಗಳೂರು(ಸೆ.20): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ SSLC ಹಾಗೂ ದ್ವಿತೀಯ PU ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್ www.kseab.karnataka.gov.in ನಲ್ಲಿ ವೀಕ್ಷಿಸಬಹುದು.

ಆಕ್ಷೇಪಣೆ ಸಲ್ಲಿಕೆಗೆ ಅವಕಾಶ, ಹೇಗೆ ಸಲ್ಲಿಸುವುದು?

ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ವೇಳಾಪಟ್ಟಿಯ ಬಗ್ಗೆ ತಮ್ಮ ಆಕ್ಷೇಪಣೆಗಳನ್ನು ಇಂದಿನಿಂದ ಅಕ್ಟೋಬರ್ 9, 2025ರ ವರೆಗೆ ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಇ-ಮೇಲ್ ಮೂಲಕ chairpersonkscab@gmail.com ಗೆ ಅಥವಾ ಹಾರ್ಡ್ ಕಾಪಿಯನ್ನು 'ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ' ಗೆ ಕಳುಹಿಸಬಹುದು.

ಇದನ್ನೂ ಓದಿ: ರಾಜ್ಯದ ಮೊದಲ 'ವಿದೇಶ ಅಧ್ಯಯನ ಎಕ್ಸ್‌ಪೋ' ಯಶಸ್ವಿ- 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

ಗಮನಿಸಿ: ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಹೆಚ್ಚಿನ ಮಾಹಿತಿಗಾಗಿ www.kseab.karnataka.gov.in ಗೆ ಭೇಟಿ ನೀಡಿ.