ಉಚಿತ ಬಸ್ಸಿನಲ್ಲಿ ಹೆಂಗಸರು ಎಲ್ಲೆಲ್ಲಿಗೋ ಹೋಗ್ತಾರೆ ಎಂದ ಶ್ರುತಿಗೆ ಆಯೋಗ ನೋಟಿಸ್‌

ಇತ್ತೀಚೆಗೆ ಚುನಾವಣಾ ಪ್ರಚಾರ ಭಾಷಣ ಮಾಡುವಾಗ, ಗ್ಯಾರಂಟಿ ಯೋಜನೆಗಳಿಂದ, ಅದರಲ್ಲೂ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಎಲ್ಲೆಲ್ಲಿಗೋ ಹೋಗುತ್ತಿದ್ದಾರೆ. ಇದು ಅವರ ಪತಿಯ ಚಿಂತೆ ಹೆಚ್ಚಿಸಿದೆ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಹಿಳಾ ಆಯೋಗ, ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ನೋಟಿಸ್‌ ನೀಡಿದೆ.

Karnataka State Commission for Women Notice to BJP Leader Shruti For Her Statement grg

ಬೆಂಗಳೂರು(ಏ.25):  ಗ್ಯಾರಂಟಿ ಯೋಜನೆ ಟೀಕಿಸುವ ಭರದಲ್ಲಿ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ನಾಯಕಿ ಶ್ರುತಿ ಅವರಿಗೆ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್ ನೀಡಲಾಗಿದೆ.

ಇತ್ತೀಚೆಗೆ ಚುನಾವಣಾ ಪ್ರಚಾರ ಭಾಷಣ ಮಾಡುವಾಗ, ಗ್ಯಾರಂಟಿ ಯೋಜನೆಗಳಿಂದ, ಅದರಲ್ಲೂ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಎಲ್ಲೆಲ್ಲಿಗೋ ಹೋಗುತ್ತಿದ್ದಾರೆ. ಇದು ಅವರ ಪತಿಯ ಚಿಂತೆ ಹೆಚ್ಚಿಸಿದೆ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಹಿಳಾ ಆಯೋಗ, ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ನೋಟಿಸ್‌ ನೀಡಿದೆ.

ಹಾಸನ ಸೆಕ್ಸ್‌ ವಿಡಿಯೋಗಳ ಬಗ್ಗೆ ತನಿಖೆಗೆ ಮಹಿಳಾ ಆಯೋಗ ಪತ್ರ

ಈ ಕುರಿತು ಕನ್ನಡಪ್ರಭಕ್ಕೆ ಪ್ರತಿಕ್ರಿಯಿಸಿರುವ ಆಯೋಗದ ಅಧ್ಯಕ್ಷ  ಡಾ.ನಾಗಲಕ್ಷ್ಮೀ ಚೌಧರಿ, ಶ್ರುತಿ ಹೇಳಿಕೆಗೆ ವಿವರಣೆ ನೀಡುವಂತೆ ನೋಟಿಸ್‌ ನೀಡಿದ್ದೇವೆ. ಮುಂದಿನ 7 ದಿನಗಳಲ್ಲಿ ಆಯೋಗದ ಕೇಂದ್ರ ಕಚೇರಿಗೆ ಬಂದು ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.

Latest Videos
Follow Us:
Download App:
  • android
  • ios