ಬೆಂಗಳೂರು :  ದಕ್ಷಿಣ ಒಳನಾಡು, ಮಲೆನಾಡು ಸೇರಿದಂತೆ ಉತ್ತರ ಒಳನಾಡಿನ ಕೆಲ ಭಾಗದಲ್ಲಿ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. 

ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಕಳೆದರೆಡು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನು ಎರಡು ದಿನ ಮುಂದುವರಯುವ ಸಾಧ್ಯತೆ ಇದೆ. ಕೊಡಗು, ಹಾಸನ, ಮಡಿಕೇರಿ, ಶಿವಮೊಗ್ಗ, ಉತ್ತರ ಕನ್ನಡ ಸೇರಿದಂತೆ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸರೆಡ್ಡಿ ಮಾಹಿತಿ ನೀಡಿದರು. 

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಿದ್ದು, ದಾವಣಗೆರೆಯ ಚನ್ನಗಿರಿಯಲ್ಲಿ 1 ಸೆಂ.ಮಿ.ಮಳೆಯಾಗಿದೆ. ಉಳಿದಂತೆ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ಬೆಳಗಾವಿಯಲ್ಲಿ 14 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.