ರಾಜ್ಯ ಸರ್ಕಾರ ಗಂಡು ಮಕ್ಕಳಿಗೂ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದೆ. ಈಗಾಗಲೇ ಬಸ್ ಪಾಸ್‌ಗೆ ಹಣ ಪಾವತಿ ಮಾಡಿದ ವಿದ್ಯಾರ್ಥಿಗಳಿಗೆ ನಾಳೆಯಿಂದ ಮರುಪಾವತಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಈ ಅರ್ಜಿ ಸಲ್ಲಿಕೆ ಹೇಗೆ?

ಬೆಂಗಳೂರು (ಜೂ.28) ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರವಹಿಸಿಕೊಂಡ ಬೆನ್ನಲ್ಲೇ ಘೋಷಿಸಿದ ಮಹತ್ವದ ಆದೇಶಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ್ ಬಸ್ ಪಾಸ್ ಕೂಡ ಒಂದು. ಗಂಡು ಮಕ್ಕಳಿಗೂ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ಅರ್ಜಿ ಸಲ್ಲಿಕೆ ವೇಳೆ ಹಣ ಪಾವತಿ ಮಾಡಿದ ವಿದ್ಯಾರ್ಥಿಗಳಿಗೆ ಇದೀಗ ಮರುಪಾವತಿ ಮಾಡಲಾಗುತ್ತಿದೆ. ಈ ಪ್ರಕಿಯೆ ನಾಳೆಯಿಂದ (ಜೂ.29) ಆರಂಭಗೊಳ್ಳುತ್ತಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದರೆ 7 ದಿನಗಳಲ್ಲಿ ಹಣ ವಿದ್ಯಾರ್ಥಿಗಳ ಖಾತೆಗೆ ಜಮೆ ಆಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಚಿತ ಪಾಸ್ ಕಾರಣದಿಂದ ಹಣ ಪಾವತಿ ಮಾಡಿದ ವಿದ್ಯಾರ್ಥಿಗಳಿಗೆ ನಾಳೆಯಿಂದ KSRTC,BMTC, NWKRTC, KKRTC ನಿಗಮದಿಂದ ಹಣ ವಾಪಸ್‌ಗೆ ಆದೇಶ ನೀಡಲಾಗಿದೆ. ಇದಕ್ಕಾಗಿ 2026-27ರ ವಿದ್ಯಾರ್ಥಿ ಬಸ್ ಪಾಸ್ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ನಿಗಮಗಳು ಶುಲ್ಕ ಪಾವತಿಸಿಕೊಂಡಿತ್ತು. ಈ ಶುಲ್ಕವನ್ನು ವಿದ್ಯಾರ್ಥಿಗಳಿಗೆ ವಾಪಸ್ ಮಾಡಲಾಗುತ್ತಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ?

ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಸಿದ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಒಟಿಪಿ ಮೂಲಕ ನೋಂದಣಿ ಮಾಡಿ ಅರ್ಜಿ ಸಲ್ಲಿಕೆ ಮಾಡಲು ಕೋರಲಾಗಿದೆ. ಅರ್ಜಿ ಸಲ್ಲಿಕೆ ವೇಳೆ ಶುಲ್ಕದ ರಸೀದಿ ವಿವರ, ಬ್ಯಾಂಕ್ ಖಾತೆ ಸೇರಿದಂತೆ ಕೆಲ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗತ್ತದೆ. ಅರ್ಜಿ ಪರಿಶೀಲನೆ ಬಳಿಕ ಅರ್ಹ ವಿದ್ಯಾರ್ಥಿಗಳಿಗೆ NEFT/RTGS ಮೂಲಕ ಹಣ ಜಮೆ ಮಾಡಲಾಗುತ್ತದೆ. 7 ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಹಣ ಮರುಪಾವತಿ ಮಾಡಲಾಗುತ್ತದೆ. ಬ್ಯಾಂಕ್ ವಿವರ ತಪ್ಪಾಗಿ ನೀಡಿದರೆ ಹಣ ಪಾವತಿಯಲ್ಲಿ ಸಮಸ್ಯೆಗಳಾಗುತ್ತದೆ. ಹೀಗಾಗಿ ಎಚ್ಚರಿಕೆವಹಿಸುವಂತೆ ಸೂಚಿಸಲಾಗಿದೆ.

ಕರ್ನಾಟಕದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಾಸ್

2026-27ನೇ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಲ್ಲರನ್ನೂ ಸೇರಿಸಿ 10 ಲಕ್ಷ ಉಚಿತ ಬಸ್ ಪಾಸ್ ಅಂದಾಜು ಮಾಡಲಾಗಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಿಸಲಾಗುತ್ತಿದೆ. ಉಚಿತ ಪಾಸ್ ಪಡೆಯಲೂ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು.