Government teacher jobs in Karnataka: ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆಗೆ (TET) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 23 ರಿಂದ ನವೆಂಬರ್ 9ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಪರೀಕ್ಷೆಯು ಡಿಸೆಂಬರ್ 7 ರಂದು ನಡೆಯಲಿದೆ..
ಬೆಂಗಳೂರು (ಅ.18): ಶಿಕ್ಷಕರಾಗುವ ಕನಸು ಕಂಡಿರುವ ಅಭ್ಯರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ (TET)ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ದೀಪಾವಳಿ ಹಬ್ಬಕ್ಕೆ ಶಿಕ್ಷಕರಾಗಲು ಬಯಸುವವರಿಗೆ ಸರ್ಕಾರ ಭರ್ಜರಿ ಉಡುಗೊರೆಯಾಗಿ ಈ ಘೋಷಣೆ ಬಂದಿದೆ. ಇದೇ ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಇದನ್ನೂ ಓದಿ: ರಾಜ್ಯದಲ್ಲಿ 18500ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ
ಶಿಕ್ಷಕರ ಹುದ್ದೆಗಳ ಭರ್ತಿ ಹೇಗೆ?
ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಡಿಸೆಂಬರ್ 7ರಂದು ನಡೆಸಲಾಗುವುದು, ಜೊತೆಗೆ ಫಲಿತಾಂಶವನ್ನು ಡಿಸೆಂಬರ್ 31ರಂದು ಪ್ರಕಟಿಸಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಸೇರಿದಂತೆ ರಾಜ್ಯದ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಿಇಟಿ ಪರೀಕ್ಷೆಯ ಮೂಲಕ ನೇಮಕಾತಿ ನಡೆಯಲಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅರ್ಹ ಅಭ್ಯರ್ಥಿಗಳು ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಸುವರ್ಣಾವಕಾಶ ಇದಾಗಿದೆ.
