Asianet Suvarna News Asianet Suvarna News

ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಇನ್ಮುಂದೆ ವಾರದ ಏಳು ದಿನವೂ ಬಿಸಿಯೂಟದ ಜೊತೆ ಮೊಟ್ಟೆ ವಿತರಣೆ!

ವಾರದ ಏಳು ದಿನಗಳ ಕಾಲ ಮಧ್ಯಾನದ ಬಿಸಿ ಊಟದೊಂದಿಗೆ ಪೌಷ್ಟಿಕ ಆಹಾರ ಮೊಟ್ಟೆ ವಿತರಣೆ ಮಾಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಹೇಳಿದರು.

Karnataka to provide 6 six eggs weekly in midday meals for govt school students rav
Author
First Published Oct 1, 2024, 8:57 PM IST | Last Updated Oct 1, 2024, 8:57 PM IST

ಶಿವಮೊಗ್ಗ (ಅ.1): ವಾರದ ಏಳು ದಿನಗಳ ಕಾಲ ಮಧ್ಯಾನದ ಬಿಸಿ ಊಟದೊಂದಿಗೆ ಪೌಷ್ಟಿಕ ಆಹಾರ ಮೊಟ್ಟೆ ವಿತರಣೆ ಮಾಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಹೇಳಿದರು.

ಇಂದು ಅಜೀಮ್ ಪ್ರೇಮ್ ಜಿ ಫೌಂಡೇಶನ್  ಸಹಯೋಗದೊಂದಿಗೆ ಸಾಗರದ ಗಾಂಧಿ ಮೈದಾನದಲ್ಲಿ ನಡೆದ  ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಈ ಹಿಂದೆ ವಾರದಲ್ಲಿ ಒಂದು ದಿನ ನೀಡಲಾಗುತ್ತಿದ್ದ ಮೊಟ್ಟೆಯನ್ನು 2ದಿನಗಳಿಗೆ ಹೆಚ್ಚಿಸಲಾಗಿತ್ತು.  ಇದೀಗ ವಿಪ್ರೊ ಸಂಸ್ಥೆಯ ಮುಖ್ಯಸ್ಥ ಅಜೀಮ್ ಪ್ರೇಮ್ ಜಿ ಅವರ 1591ಕೋಟಿ ರೂ. ಗಳ ಆರ್ಥಿಕ ನೆರವಿನಿಂದ ಮುಂದಿನ ಮೂರು ವರ್ಷಗಳ ಅವಧಿಗೆ ಮೊಟ್ಟೆ ವಿತರಿಸಲು ಒಡಂಬಡಿಕೆ ಮಾಡಿಕೊಂಡಿದೆ ಎಂದರು.

Karnataka to provide 6 six eggs weekly in midday meals for govt school students rav

ಶಾಲಾ ಮಕ್ಕಳಿಗೆ ಬಿಸಿ ಊಟದ ಜೊತೆ ವಾರದಲ್ಲಿ 6 ದಿನ ಮೊಟ್ಟೆ: ಸಚಿವ ಮಹದೇವಪ್ಪ

 ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಕಳೆದ ವಾರ ರಾಜ್ಯದ ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಈಗಾಗಲೇ ಪೌಸ್ತಿಕ ಆಹಾರ ಹಾಲು, ರಾಗಿಮಾಲ್ಟ್ ನ್ನು ಮಕ್ಕಳಿಗೆ ನೀಡಲಾಗುತ್ತಿದೆ. ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಸೇರಿದಂತೆ 1 ರಿಂದ 10ನೇ ತರಗತಿಯವರೆಗಿನ  ಒಟ್ಟು 76,000 ಶಾಲೆಗಳ 57 ಲಕ್ಷ ಮಕ್ಕಳಿಗೆ ವಾರದ ಏಳು ದಿನವೂ ಮೊಟ್ಟೆ ವಿತರಣೆ ಮಾಡಲಾಗುತ್ತದೆ ಎಂದರು.

 ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳು ಶೈಕ್ಷಣಿಕವಾಗಿ ಹಿಂದುಳಿದಿವೆ. ಮಾತ್ರವಲ್ಲ ಅಲ್ಲಿನ ಮಕ್ಕಳ ಪೌಷ್ಟಿಕತೆ, ಶೈಕ್ಷಣಿಕ ಪ್ರಗತಿಯು ನಿರೀಕ್ಷೆ ಮಟ್ಟದಲ್ಲಿ ಆಗಿಲ್ಲ ಎಂಬುದು ಗಮನಕ್ಕೆ ಬಂದಿದೆ. ಹೀಗಾಗಿ ಕಲ್ಯಾಣ ಕರ್ನಾಟಕ ಯೋಜನೆಯಲ್ಲಿ 5000 ಕೋಟಿ ರೂ. ವಿವಿಧ ಯೋಜನೆಗಳಿಗಾಗಿ ಮೀಸಲಿರಿಸಲಾಗಿದೆ. ಈ ಅನುದಾನದಲ್ಲಿ 1250 ಕೋಟಿಗಳನ್ನು ಅಕ್ಷರ ಅವಿಷ್ಕಾರ ಯೋಜನೆಗಾಗಿ ಮೀಸಲಿಡಲಾಗಿದೆ. ಎಂದರು.

ಇನ್ನು ಶಾಲೆ ವಿದ್ಯಾರ್ಥಿಗಳಿಗೆ ಪ್ರತಿದಿನ ಮೊಟ್ಟೆ: 4 ದಿನ ಅಜೀಂ ಪ್ರೇಮ್‌ಜೀ ಪ್ರತಿಷ್ಠಾನದಿಂದ ವಿತರಣೆ

ಮಲೆನಾಡು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಳೆದ ಸಾಲಿನ ಮಳೆಯಿಂದಾಗಿ ಹಲವು ಶಾಲಾ ಕಟ್ಟಡಗಳು ಶಿಥಿಲಗೊಂಡಿವೆ. ಕಟ್ಟಡಗಳ ದುರಸ್ತಿ ಹಾಗೂ ನೂತನ ಕಟ್ಟಡಗಳ ನಿರ್ಮಾಣಕ್ಕೆ  ತುರ್ತು ಕ್ರಮಗಳನ್ನು ಮುಂದಿನ ಒಂದು ವರ್ಷದೊಳಗಾಗಿ ಕೈಗೊಂಡು ಪೂರ್ಣಗೊಳಿಸಲಾಗುವುದು. ಇದಕ್ಕೆ ದಾನಿಗಳ ಆರ್ಥಿಕ ನೆರವಿನೊಂದಿಗೆ ಸಹಕಾರ ಪಡೆದುಕೊಳ್ಳಲಾಗುವುದು ಎಂದರು.

Latest Videos
Follow Us:
Download App:
  • android
  • ios