Asianet Suvarna News Asianet Suvarna News

ಕೊವಿಡ್ : 3ನೇ ಅಲೆ ತಡೆಗೆ ಡಾ. ದೇವಿ ಶೆಟ್ಟಿಸಮಿತಿ

  • ಕೋವಿಡ್‌ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಮಿತಿ
  • ನಾರಾಯಣ ಹೆಲ್ತ್‌ ಸಂಸ್ಥೆ ಅಧ್ಯಕ್ಷ ಡಾ.ದೇವಿಪ್ರಸಾದ್‌ ಶೆಟ್ಟಿಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್‌ ಕಮಿಟಿ 
  • ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ  ಮಾಹಿತಿ
Karnataka To set up task force  for covid  third wave under Dr Devi shetty snr
Author
Bengaluru, First Published May 14, 2021, 7:51 AM IST

ಬೆಂಗಳೂರು (ಮೇ.14):  ಕೋವಿಡ್‌ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ನಾರಾಯಣ ಹೆಲ್ತ್‌ ಸಂಸ್ಥೆ ಅಧ್ಯಕ್ಷ ಡಾ.ದೇವಿಪ್ರಸಾದ್‌ ಶೆಟ್ಟಿಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್‌ ಕಮಿಟಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

'ಕೊರೋನಾ 2ನೇ ಅಲೆಯಲ್ಲಿ ತಲ್ಲಣ : ಕಾಯದೇ ಲಸಿಕೆ ಪಡೆಯಿರಿ' ..

ಗುರುವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರುವ ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳಲ್ಲಿ ಮೂರನೇ ಅಲೆ ಎದುರಾಗುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. ಈ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಸಮಸ್ಯೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಡಾ.ದೇವಿಪ್ರಸಾದ್‌ ಶೆಟ್ಟಿಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗುವುದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಭಾರತದಲ್ಲಿ 2 ಲಕ್ಷ ನರ್ಸ್, 1.5 ಲಕ್ಷ ವೈದ್ಯರ ಅಗತ್ಯ ಬೀಳಬಹುದು: ಡಾ. ದೇವಿ ಶೆಟ್ಟಿ ...

ಕಾರ್ಯಪಡೆಯಲ್ಲಿ ಇನ್ನಿತರ ತಜ್ಞ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇರಲಿದ್ದಾರೆ. ಮೂರನೇ ಅಲೆಯಲ್ಲಿ ಹೆಚ್ಚಿನ ಪರಿಣಾಮ ಉಂಟಾಗದಂತೆ ಎಚ್ಚರಿಕೆ ವಹಿಸಲಾಗುವುದು. ಅಗತ್ಯ ಸೌಲಭ್ಯ ಜತೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios