Asianet Suvarna News Asianet Suvarna News

ಕೊನೆಗೂ ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯ: ಬಸ್ ಸಂಚಾರ ಶುರು...!

ರಾಜ್ಯದಲ್ಲಿ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಸಿಬ್ಬಂದಿ ಮುಷ್ಕರ ಇದೀಗ ತಾನೆ ಅಂತ್ಯವಾಗಿದೆ. ಸಾರಿಗೆ ಸಿಬ್ಬಂದಿ ಮುಷ್ಕರವನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಅವರು ಫ್ರೀಡಂಪಾರ್ಕ್​ನಲ್ಲಿ ನೌಕರರ ಸಮ್ಮುಖದಲ್ಲಿ ಘೋಷಿಸಿದ್ದಾರೆ.

Karnataka transportation employee Takes back Protest rbj
Author
Bengaluru, First Published Dec 14, 2020, 4:50 PM IST

ಬೆಂಗಳೂರು, (ಡಿ.14): ಸಾರಿಗೆ ನೌಕರರು ನಾಲ್ಕು ದಿನಗಳಿಂದ ನಡೆಸುತ್ತಿದ್ದ ಮುಷ್ಕರ ಕೊನೆಗೂ ಅಂತ್ಯ ಕಂಡಿದ್ದು, ರಾಜ್ಯದೆಲ್ಲೆಡೆ ಬಸ್​ ಸಂಚಾರ ಆರಂಭಗೊಂಡಿದೆ.

ಕೋಡಿಹಳ್ಳಿ ಚಂದ್ರಶೇಖರ್ ಅವರು ಫ್ರೀಡಂಪಾರ್ಕ್​ನಲ್ಲಿ ನೌಕರರ ಸಮ್ಮುಖದಲ್ಲಿ ಘೋಷಿಸಿದ್ದಾರೆ. ಸರ್ಕಾರದಿಂದ ಲಿಖಿತ ಭರವಸೆ ದೊರತಿರುವ ಹಿನ್ನೆಲೆಯಲ್ಲಿ ಮುಷ್ಕರ ಅಂತ್ಯವಾಗಿದೆ ಎಂದು ಅವರು ಪ್ರಕಟಿಸಿದರು.

ಸಾರಿಗೆ ನೌಕರರಿಗೆ ಸರ್ಕಾರ ನೀಡಿರುವ ಭರವಸೆಗಳೇನು? ಇಲ್ಲಿದೆ ಡಿಟೇಲ್ಸ್

ಸಾರಿಗೆ ಸಂಸ್ಥೆ ಸಿಬ್ಬಂದಿಯ 4 ದಿನಗಳ ಮುಷ್ಕರ ವಾಪಸ್​ ಪಡೆಯುತ್ತಿದ್ದು,  ರಾಜ್ಯಾದ್ಯಂತ ಎಲ್ಲಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುತ್ತಾರೆ. ಮುಷ್ಕರದಿಂದ ತೊಂದರೆಯಾಗಿದ್ದಕ್ಕೆ ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದರು.

ಸರ್ಕಾರ ಒಪ್ಪಿದ್ದ 9 ಬೇಡಿಕೆಗಳು ಪರಿಷ್ಕರಣೆಯಾಗಿದೆ. ನಮ್ಮ ಮೊದಲ ಬೇಡಿಕೆ ಮಾತ್ರ ಘೋಷಣೆ ಆಗಿಲ್ಲ. ಜೊತೆಗೆ, 6ನೇ ವೇತನ ಆಯೋಗದ ಜಾರಿ 2021ರ ಜನವರಿಗೆ ಜಾರಿಯಾಗುತ್ತದೆ. ಕಾನೂನು ಪ್ರಕಾರವಾಗಿ ಜಾರಿಗೆ ಬರುತ್ತೆ, ತಡೆಯಲಾಗಲ್ಲ. ಈ ಎರಡೂ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದು ಸಾರಿಗೆ ನೌಕರರಿಗೆ ತಿಳಿಸಿದರು. 

Follow Us:
Download App:
  • android
  • ios