ಕೇಂದ್ರದ ವಕ್ಫ್‌ ತಿದ್ದುಪಡಿ ವಿರೋಧಿಸಿ; ಸಿಎಂಗೆ ಜಮೀರ್‌ ಅಹ್ಮದ್ ನಿಯೋಗ ಮನವಿ

ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಹಾಗೂ ಮುಂದಿನ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಖಂಡನಾ ನಿರ್ಣಯ ತೆಗೆದುಕೊಳ್ಳುವಂತೆ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮದ್‌ ಖಾನ್‌ ನೇತೃತ್ವದ ನಿಯೋಗವು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

Karnataka Waqf board opposes amendment bill Against interests of community rav

ಬೆಂಗಳೂರು (ಆ.30):  ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಹಾಗೂ ಮುಂದಿನ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಖಂಡನಾ ನಿರ್ಣಯ ತೆಗೆದುಕೊಳ್ಳುವಂತೆ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮದ್‌ ಖಾನ್‌ ನೇತೃತ್ವದ ನಿಯೋಗವು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆ ತಿದ್ದುಪಡಿಗೆ ಉದ್ದೇಶಿಸಿದ್ದು, ರಾಜ್ಯ ವಕ್ಫ್‌ ಬೋರ್ಡ್‌ ಇದನ್ನು ತೀವ್ರವಾಗಿ ಖಂಡಿಸಿದೆ. ರಾಜ್ಯ ವಕ್ಫ್‌ ಬೋರ್ಡ್‌ ಅಧ್ಯಕ್ಷ ಅನ್ವರ್ ಬಾಷಾ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲೂ ಕೇಂದ್ರದ ಪ್ರಸ್ತಾವನೆ ವಿರೋಧಿಸಿ ನಿರ್ಣಯ ತೆಗೆದುಕೊಳ್ಳಲಾಗಿದೆ.

ವಕ್ಫ್‌ ಕಾನೂನಿನಲ್ಲಿ ಭೂ ಕಬಳಿಕೆಗೆ ಅವಕಾಶ ಕೊಟ್ಟಿತ್ತಾ ಕಾಂಗ್ರೆಸ್?‌ ವಕ್ಫ್‌ ಕಾನೂನು 1995 ಹೇಳೋದೇನು?

ಈ ನಿರ್ಣಯದ ಪ್ರತಿಯನ್ನು ಸಿದ್ದರಾಮಯ್ಯ ಅವರಿಗೆ ಜಮೀರ್‌ ಅಹಮದ್‌ ಹಸ್ತಾಂತರಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ವಕ್ಫ್‌ ಬೋರ್ಡ್‌ ಅಧ್ಯಕ್ಷ ಅನ್ವರ್‌ ಬಾಷಾ ಸೇರಿ ಹಲವರು ಹಾಜರಿದ್ದರು.

Latest Videos
Follow Us:
Download App:
  • android
  • ios