ಕರಾವಳಿ, ಮಲೆನಾಡಿನ ಕೆಲವೆಡೆ ತಂಪೆರೆದ ವರುಣ, ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮಾಹಿತಿ

ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಭಾಗಗಳಲ್ಲಿ ಶುಕ್ರವಾರ ಅಲ್ಪ ಪ್ರಮಾಣದ ಮಳೆ ಬಿದ್ದಿದೆ.

karnataka weather Report IMD predicts rainfall in many district gow

ಬೆಂಗಳೂರು (ಮಾ.22): ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಭಾಗಗಳಲ್ಲಿ ಶುಕ್ರವಾರ ಅಲ್ಪ ಪ್ರಮಾಣದ ಮಳೆ ಬಿದ್ದಿದೆ. ಮಂಗಳೂರು ನಗರ ಸೇರಿ ದ‌.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ. ಜಿಲ್ಲೆಯಾದ್ಯಂತ ಸುರಿದ ವರ್ಷದ ಮೊದಲ ಮಳೆಗೆ ತಂಪಾದ ಇಳೆ. ಮಂಗಳೂರು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿ ಹಲವೆಡೆ ಮಳೆ ಸುದ್ದಿದ್ದು, ಏಕಾಏಕಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.

ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆ ಇದೆ. ಮಳೆ ಜೊತೆಗೆ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ. ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನದಲ್ಲಿ ಏರುಪೇರು ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಎಂಜಿ ಮೋಟಾರ್ಸ್‌, ಜೆಎಸ್‌ಡಬ್ಲ್ಯೂನ ಹೊಸ ಎಲೆಕ್ಟ್ರಿಕ್‌ ಕಾರು ಬಿಡುಗಡೆ

ನಿನ್ನೆ ರಾಜ್ಯದ ಕೆಲ ಜಿಲ್ಲೆಯಲ್ಲಿ ಮಳೆಯಾಗಿತ್ತು. ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶಗಳು. ಶಿವಮೊಗ್ಗ ಜಿಲ್ಲೆಯ ಸಾಗರ, ರಿಪ್ಪನ್ ಪೇಟೆ ಸೇರಿದಂತೆ ಹಲವು ಕಡೆ ವರುಣ ಧರೆಗೆ ತಂಪೆರೆದ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ , ಬದಿಯಡ್ಕ ಸೇರಿದಂತೆ ಹಲವೆಡೆ ಶುಕ್ರವಾರ ಬೆಳಗ್ಗೆ ಮಳೆಯಾಗಿದೆ.

Latest Videos
Follow Us:
Download App:
  • android
  • ios