ರಾಜ್ಯಾದ್ಯಂತ ಒಂದು ವಾರ ಒಣ ಹವೆ; ಮಳೆ ಆಸೆಯಲ್ಲಿದ್ದವರಿಗೆ ಭಾರಿ ನಿರಾಸೆ

ರಾಜ್ಯಾದ್ಯಂತ ಇನ್ನೂ ಒಂದು ವಾರಗಳ ಮಳೆ ಮುನ್ಸೂಚನೆಯೇ ಇಲ್ಲ. ಮಳೆಯ ಮೋಡಗಳ ಬದಲಾಗಿ 7 ದಿನಗಳ ಕಾಲ ಒಣಹವೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka weather report one week of drought across the state and no rain sat

ಬೆಂಗಳೂರು (ಏ.24): ರಾಜ್ಯಾದ್ಯಂತ ಒಂದು ವರಾಗಳ ಕಾಲ ಒಣಹವೆ ಮುಂದುವರೆಯಲಿದೆ. ಈ ಮೂಲಕ ರಾಜ್ಯದಲ್ಲಿ ಮಳೆ ನಿರೀಕ್ಷೆಯಲ್ಲಿದ್ದ ಜನರಿಗೆ ಭಾರಿ ನಿರಾಸೆಯಾಗಲಿದೆ. ಜೊತೆಗೆ, ಮುಂದಿನ ಐದು ದಿನಗಳ ಕಾಲ ಶಾಖದ ಅಲೆಗಳು (ಉಷ್ಣದ ಅಲೆ) ಉಂಟಾಗಲಿದ್ದು, ಉಷ್ಣಾಂಶವೂ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಬೆಳಗಾವಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಬಾಕಿ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಇನ್ನು ಏ.25ರಿಂದ ಏ.30ರವರೆಗೆ ರಾಜ್ಯದಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯದ ದೈನಂದಿನ ಹವಾಮಾನ ವರದಿ ನೀಡಿದೆ.

ಸುಪ್ರೀಂ ಚಾಟಿ ಬೀಸಿದ ಬಳಿಕ ಮತ್ತೆ ಪೇಪರ್‌ಗಳಲ್ಲಿ ದೊಡ್ಡ ಜಾಹೀರಾತು ನೀಡಿ ಕ್ಷಮೆ ಕೇಳಿದ ಪತಂಜಲಿ ಬಾಬಾ

ಶಾಖದ ಅಲೆಯ ಎಚ್ಚರಿಕೆ: 
ಮೊದಲ ದಿನವಾದ ಇಂದು ಬುಧವಾರ ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಹೆಚ್ಚಾಗುವ ಸಾಧ್ಯತೆ ಇದೆ. ಏ.25ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಮತದಾನದ ದಿನದಂದು ಭಾರಿ ಬಿಸಿಲು:  ಇನ್ನು ರಾಜ್ಯದ ದಕ್ಷಿಣ ಒಳನಾಡಿದ 14 ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ. ಈ 14 ಜಿಲ್ಲೆಗಳ ಪೈಕಿ ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣಹವೆ ಪ್ರಮಾಣ ಹೆಚ್ಚಾಗಲಿದೆ. ಜೊತೆಗೆ ಇದೇ ದಿನದಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿಯೂ ಬಿಸಿಲು ಮತ್ತಿ ಒಣಹವೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗ್ಳೂರು ಕರಗದಲ್ಲಿ ಗೋವಿಂದನದ್ದೇ ಜಪ: ಸಿಎಂ ಭೇಟಿ ವೇಳೆ ಮೋದಿ, ಮೋದಿ... ಘೋಷಣೆ..!

ಗರಿಷ್ಠ ತಾಪಮಾನ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳ: ಏ.27ರಂದು ಹಾಗೂ ಏ.28ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಒಣಹವೆ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ  ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

Latest Videos
Follow Us:
Download App:
  • android
  • ios