ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಜೂ.22ರ ವರೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಭಾಗಗಳಿಗೆ ಹವಾಮಾನ ಇಲಾಖೆ ಯಲ್ಲೊ ಅಲರ್ಟ್ ಘೋಷಿಸಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ.
ಬೆಂಗಳೂರು (ಜೂ.16): ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದಿನಿಂದ ಜೂ.22ರ ವರೆಗೆ ಬೆಂಗಳೂರು ಸೇರಿ ರಾಜದ ಹಲವು ಜಿಲ್ಲೆಯಗಳ್ಲಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಈ ಭಾಗಗಳಲ್ಲಿ ಯಲ್ಲೊ ಅಲರ್ಟ್!
ಮುಂದಿನ ಕೆಲವು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು ಮಳೆಯಾಗುವ ವೇಳೆ ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ನಗರದಲ್ಲಿ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಸಣ್ಣ ಪ್ರಕರಣದಲ್ಲಿ ಮಳೆಯಾಗುತ್ತಿದೆ. ಇನ್ನು ಮುಂದಿನ 1 ವಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಮತ್ತು ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆಯಿಂದ ಹವಾಮಾನ ಇಲಾಖೆ ತಿಳಿಸಿದೆ.


