Asianet Suvarna News Asianet Suvarna News

ರಾಜ್ಯದಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

* ರಾಜ್ಯದಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ
* ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಸೂಚನೆ ನೀಡಿದ ಹವಾಮಾನ ಇಲಾಖೆ 
* ಒಟ್ಟು 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

Karnataka-weather yellow-alert-in-17-districts for heavy-rain-predicted-till-june-5th rbj
Author
Bengaluru, First Published Jun 3, 2021, 4:11 PM IST

ಬೆಂಗಳೂರು, (ಜೂನ್.02): ರಾಜ್ಯದಲ್ಲಿ ಮೂರು ದಿನ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಜೂನ್ 3 ರಿಂದ 5 ರವರೆಗೆ 3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಜೂ.3ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ: ಮುಂಗಾರು ಪೂರ್ವ ಭಾರೀ ಮಳೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇನ್ನು ಮೂರು ದಿನಗಳ ಕಾಲ ಬಾರಿ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಒಟ್ಟು 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. - 

 ಉತ್ತರ ಒಳನಾಡಿನ ಬಹುತೇಕ ಎಲ್ಲ ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು,ಹಾಸನ, ಕೊಡಗು, ಬೆಳಗಾವಿ, ಧಾರವಾಡ, ವಿಜಯಪುರ , ಬಾಗಲಕೋಟೆ , ಕಲಬುರಗಿ ಕಡೆ ಬಾರಿ ಮಳೆಯಾಗಲಿದೆ.

ಇನ್ನು  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡು ದಿನಗಳ‌ ಕಾಲ ಮಳೆಯಾಗುವ ಸಾಧ್ಯತೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಚನ್ನಬಸವನಗೌಡ. ಎಸ್.ಪಾಟೀಲ್ ತಿಳಿಸಿದ್ದಾರೆ.

Follow Us:
Download App:
  • android
  • ios