ಬೆಂಗಳೂರು (ಆ.21): ರಾಜ್ಯದಲ್ಲಿ ಗೋಹತ್ಯೆ ನಿಷೇಧಿಸುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಮಾಡುವುದು ನಮ್ಮ ಕಾರ್ಯಸೂಚಿಯಾಗಿದೆ. ಕಾಂಗ್ರೆಸ್‌ ಪಕ್ಷ ಇದಕ್ಕೆ ವಿರೋಧ ಮಾಡಿದರೂ ಹಿಂದೆ ಸರಿಯುವುದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಈಗ ನಮ್ಮ ಪಕ್ಷದ ಸರ್ಕಾರವೇ ಇದೆ. ಹೀಗಾಗಿ ಕಾಯ್ದೆ ಜಾರಿಗೆ ತಂದು ಗೋರಕ್ಷಣೆ ಮಾಡುವುದಾಗಿ ತಿಳಿಸಿದರು.

'ಗೋಮಾತೆ ಕಸಾಯಿಖಾನೆಗೆ ಹೋಗಬಾರದು ಇದು ಬಿಜೆಪಿ ಸರ್ಕಾರದ ಸಂಕಲ್ಪ'

ಕಾಂಗ್ರೆಸ್‌ನ ವಿರೋಧಕ್ಕೆ ಸೊಪ್ಪು ಹಾಕದೆ ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಅಂಗೀಕಾರ ಪಡೆಯುತ್ತೇವೆ. ಗೋ ಹತ್ಯೆ ಕಾಯ್ದೆ ಕಳೆದ 2012ರಲ್ಲೇ ಜಾರಿಯಾಗಬೇಕಿತ್ತು, ಆದರೆ ಆಗ ಕೇಂದ್ರದಲ್ಲಿದ್ದ ಕಾಂಗ್ರೆಸ್‌ ಸರ್ಕಾರ ಕಾಯ್ದೆ ಜಾರಿಗೆ ಅಡ್ಡಿಪಡಿಸಿತು ಎಂದು ಆರೋಪಿಸಿದರು.