Asianet Suvarna News Asianet Suvarna News

ವಾರ್ತಾ ಇಲಾಖೆಯ ಸಾಕ್ಷ್ಯಚಿತ್ರಕ್ಕೆ ‘ರಜತ ಕಮಲ’ ಗರಿ: ಸಿಎಂ ಬೊಮ್ಮಾಯಿ ಮೆಚ್ಚುಗೆ

ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ‘ನಾದದ ನವನೀತ ಡಾ.ಪಂಡಿತ್‌ ವೆಂಕಟೇಶ್‌ ಕುಮಾರ್‌’ ಸಾಕ್ಷ್ಯಚಿತ್ರಕ್ಕೆ ರಜತ ಕಮಲ ಪ್ರಶಸ್ತಿ ಲಭಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಾರ್ತಾ ಇಲಾಖೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Karnataka Wins Rajat Kamal Award For Documentary Film Naadada Navaneeta Pandit gvd
Author
First Published Oct 2, 2022, 10:28 AM IST

ಬೆಂಗಳೂರು (ಅ.02): ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ‘ನಾದದ ನವನೀತ ಡಾ.ಪಂಡಿತ್‌ ವೆಂಕಟೇಶ್‌ ಕುಮಾರ್‌’ ಸಾಕ್ಷ್ಯಚಿತ್ರಕ್ಕೆ ರಜತ ಕಮಲ ಪ್ರಶಸ್ತಿ ಲಭಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಾರ್ತಾ ಇಲಾಖೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಧಾರವಾಡದ ಅದ್ವಿತೀಯ ಹಿಂದುಸ್ತಾನಿ ಗಾಯಕ ಪಂಡಿತ್‌ ಎಂ.ವೆಂಕಟೇಶ್‌ ಕುಮಾರ್‌ ಬಗ್ಗೆ ವಾರ್ತಾ ಇಲಾಖೆಯು 2020ರಲ್ಲಿ ಸಾಕ್ಷ್ಯಚಿತ್ರವನ್ನು ನಿರ್ಮಿಸಿತ್ತು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರು ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ್ದರು. ಇದು 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಚಲನಚಿತ್ರೇತರ ವಿಭಾಗದ ಕಲೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ. ಶುಕ್ರವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಾರ್ತಾ ಇಲಾಖೆಗೆ ರಜತ ಕಮಲ ಪ್ರಶಸ್ತಿ ಪ್ರದಾನ ಮಾಡಿದರು.

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ‘ಡೊಳ್ಳು’ ಅತ್ಯುತ್ತಮ ಕನ್ನಡ ಚಲನಚಿತ್ರ ಮತ್ತು ಪರಿಸರ ಸಂರಕ್ಷಣೆ ವಿಭಾಗದಲ್ಲಿ ‘ತಲೆದಂಡ’ ಚಲನಚಿತ್ರವು ಅತ್ಯುತ್ತಮ ಪ್ರಶಸ್ತಿ ಪಡೆದುಕೊಂಡಿದೆ. ಪ್ರಶಸ್ತಿ ಪಡೆದ ಎಲ್ಲಾ ಚಲನಚಿತ್ರ ಮತ್ತು ಸಾಕ್ಷ್ಯಚಿತ್ರಗಳ ನಿರ್ಮಾಣ ತಂಡಗಳ ಸಾಧನೆಯನ್ನು ಮುಖ್ಯಮಂತ್ರಿಗಳು ಮುಕ್ತಕಂಠದಿಂದ ಅಭಿನಂದಿಸಿದ್ದಾರೆ.

ವಾರ್ತಾ ಇಲಾಖೆಯ ಮಂಜುನಾಥ್‌ ಪ್ರಸಾದ್‌ ಅವರು ಮಾತನಾಡಿ, ರಾಷ್ಟ್ರಮಟ್ಟದಲ್ಲಿ ರಜತ ಕಮಲ ಪ್ರಶಸ್ತಿಗಳ ಮೂಲಕ ಕನ್ನಡ ಚಿತ್ರರಂಗದ ಸಾಧನೆಯನ್ನು ಉನ್ನತಮಟ್ಟಕ್ಕೆ ಏರಿಸಿರುವ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ಚಲನಚಿತ್ರಗಳ ಎಲ್ಲಾ ನಿರ್ಮಾಪಕರು, ನಿರ್ದೇಶಕರು ಮತ್ತು ಚಿತ್ರತಂಡದ ಸಾಧನೆಯ ಶ್ಲಾಘನೀಯ. ಅದರಲ್ಲಿಯೂ ಸಾಕ್ಷ್ಯಚಿತ್ರ ನಿರ್ಮಾಣದಲ್ಲಿ ವಾರ್ತಾ ಇಲಾಖೆಯು ಸದಾ ಮುಂಚೂಣಿಯಲ್ಲಿದೆ. ಇಲಾಖೆಯ ಸಂಗ್ರಹಾಗಾರದಲ್ಲಿ ಅಪರೂಪದ ಸಾಕ್ಷ್ಯಚಿತ್ರಗಳಿವೆ. 2020ರ ಸಾಲಿನದ್ದು ಶ್ರೇಷ್ಠ ಸಾಧನೆಯಾಗಿದೆ ಎಂದು ಬಣ್ಣಿಸಿದ್ದಾರೆ.

ಯಾರು ಭಾರತ್ ಜೋಡೋ ಮಾಡಿದ್ದಾರೆ, ತೋಡೋ ಮಾಡಿದ್ದಾರೆಂದು ಎಲ್ಲರಿಗೂ ಗೊತ್ತಿದೆ: ಸಿಎಂ ಬೊಮ್ಮಾಯಿ

ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್‌.ಹರ್ಷ ಮಾತನಾಡಿ, ಇದೇ ಮೊದಲ ಬಾರಿಗೆ ವಾರ್ತಾ ಇಲಾಖೆಯು ನಿರ್ಮಿಸಿರುವ ಸಾಕ್ಷ್ಯಚಿತ್ರವು ರಾಷ್ಟ್ರೀಯ ಮಟ್ಟದಲ್ಲಿ ರಜತ ಕಮಲ ಪ್ರಶಸ್ತಿಗೆ ಭಾಜವಾಗಿದೆ. ಹಾಗೆಯೇ, 2020ರಲ್ಲಿ ವಾರ್ತಾ ಇಲಾಖೆಯೊಂದೇ ದೇಶದಲ್ಲಿ ಈ ಬಗೆಯ ಸಾಧನೆಯನ್ನು ಮಾಡಿದೆ. ಇಲಾಖೆಗೆ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ರಜತ ಕಮಲ ಪ್ರಶಸ್ತಿ ಸಂದಿರುವುದು ಇಲಾಖೆಯ ಹಿರಿಮೆಯನ್ನು ಮತ್ತಷ್ಟುಹೆಚ್ಚಿಸಿದೆ. ಇದಕ್ಕಾಗಿ ಶ್ರಮಿಸಿದ ಇಲಾಖೆಯ ಎಲ್ಲಾ ಸಿಬ್ಬಂದಿಯನ್ನು ಮತ್ತು ವೈಯಕ್ತಿಕವಾಗಿ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರನ್ನು ಅಭಿನಂದಿಸಲಾಗುವುದು. ಇಲಾಖೆಯು ಇನ್ನು ಮುಂದೆ ಉತ್ತಮ ಸದಭಿರುಚಿಯ ಸಾಕ್ಷ್ಯಚಿತ್ರಗಳನ್ನು ನಿರ್ಮಿಸಲಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಬೆಂಬಲ ಮತ್ತು ನಮ್ಮ ತಂಡದ ಪರಿಶ್ರಮ ಪರಿಣಾಮವಾಗಿ ಕರ್ನಾಟಕವೇ ತಲೆ ಎತ್ತಿ ನೋಡುವ ಹೆಮ್ಮೆಯ ಗರಿ ಲಭಿಸಿದೆ. ಕರ್ನಾಟಕದ ಕಲೆ, ವಿಶೇಷ ಸಂಸ್ಕೃತಿ, ನಾಡಿನ ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಬಿಂಬಿಸುವಂತಹ ಸಾಕ್ಷ್ಯ ಚಿತ್ರ ನಿರ್ಮಾಣವಾಗಿದೆ. ವಾರ್ತಾ ಇಲಾಖೆ ಪಾಲಿಗೆ ಚರಿತ್ರೆಯಲ್ಲಿ ಉಳಿಯುವ ದಿನವಾಗಿದೆ. ರಾಷ್ಟ್ರಮಟ್ಟದಲ್ಲಿ ರಜತ ಕಮಲ ಪಡೆಯುವಲ್ಲಿ ಯಶಸ್ವಿಯಾಗಿದ್ದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ನಾದದ ನವನೀತ ಡಾ.ಪಂಡಿತ್‌ ವೆಂಕಟೇಶ್‌ ಸಾಕ್ಷ್ಯಚಿತ್ರಕ್ಕೆ ಐದು ಲಕ್ಷ ರು. ವೆಚ್ಚವಾಗಿದೆ ಎಂದರು.

2 ಪ್ರವಾಸಿ ಸರ್ಕಿಟ್‌ 2 ತಿಂಗಳಲ್ಲಿ ಶುರು: ಸಿಎಂ ಬೊಮ್ಮಾಯಿ

ವಾರ್ತಾ ಇಲಾಖೆ ತಯಾರು ಮಾಡಿರುವ ಸಾಕ್ಷ್ಯ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ರಜತ ಕಮಲ ಪ್ರಶಸ್ತಿ ದೊರಕಿದೆ. ನಮಗೆಲ್ಲರಿಗೂ ಸಂತೋಷ ಮತ್ತು ಹೆಮ್ಮೆಯಾಗಿದೆ. ಇದರಿಂದ ಕೆಲಸ ಮಾಡಿದ ವಾರ್ತಾ ಇಲಾಖೆಯ ಅಧಿಕಾರಿಗಳು, ಹಿರಿಯ ಅಧಿಕಾರಿಗಳು, ನಿರ್ದೇಶಕರು, ಪ್ರಧಾನ ಕಾರ್ಯದರ್ಶಿ ಸೇರಿದಂತೆ ಇದರಲ್ಲಿ ತೊಡಗಿರುವ ತಾಂತ್ರಿಕ ವರ್ಗದವರಿಗೂ ಎಲ್ಲರಿಗೂ ಅಭಿನಂದನೆ. ಪ್ರಶಸ್ತಿ ಮೂಲಕ ರಾಜ್ಯದ ಚಲನಚಿತ್ರ ರಂಗಕ್ಕೆ ಇನ್ನೊಂದು ಗರಿ ಸೇರಿದಂತಾಗಿದೆ.
- ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

Follow Us:
Download App:
  • android
  • ios