ಭಟ್ಕಳದಲ್ಲಿ ಅಕ್ರಮವಾಗಿ ಒಂಟೆಗಳನ್ನು ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸಾತ್ಮಕವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ 8 ಒಂಟೆಗಳನ್ನು ರಕ್ಷಿಸಲಾಗಿದ್ದು, ಆರೋಪಿಗಳ ವಿರುದ್ಧ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಅಕ್ರಮವಾಗಿ ಒಂಟೆ ಸಾಗಣೆ: ಮೂವರ ಬಂಧನ
ಕಾರವಾರ : ಅಕ್ರಮವಾಗಿ ಒಂಟೆಗಳ ಸಾಗಿಸುತ್ತಿದ್ದ ಮೂವರನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 8 ಒಂಟೆಗಳನ್ನು ಪೊಲೀಸರು ವಶಕ್ಕೆ ಪಡೆದು ರಕ್ಷಿಸಿದ್ದಾರೆ. ಮಹಾರಾಷ್ಟ್ರ ನೋಂದಣಿ ಸಂಖ್ಯೆಯ ಲಾರಿಯಲ್ಲಿ ಒಂಟೆಗಳನ್ನು ಸಾಗಿಸಲಾಗುತ್ತಿತ್ತು. ಭಟ್ಕಳದ ಶಿರಾಲಿ ಯಿಂದ ಉಳ್ಳಾಲದತ್ತ ಈ ಒಂಟೆಗಳನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಬಂಧಿತರನ್ನು ಮಧ್ಯಪ್ರದೇಶ ಮೂಲದ ಕರಣ್ ಬಾಬರ್, ಮಹಾರಾಷ್ಟ್ರದ ಸುಹಾಸ್ ಸೂರ್ಯವಂಶಿ ಹಾಗೂ ಯಶ ಗೋಟಕಿಂಡೆ ಎಂದು ಗುರುತಿಸಲಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರ ಅಡಿಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.


