ಪ್ರಸ್ತುತ ಕೆಆರ್‌ಎಸ್‌ನಲ್ಲಿ 112.32 ಅಡಿ ನೀರಿದೆ. ಅಣೆಕಟ್ಟೆಗೆ 3,960 ಕ್ಯುಸೆಕ್‌ ನೀರಿನ ಒಳಹರಿವಿದ್ದರೆ, ಜಲಾಶಯದಿಂದ 7,256 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಇದರಲ್ಲಿ ನದಿಗೆ 5,243 ಕ್ಯುಸೆಕ್‌, ನಾಲೆಗಳಿಗೆ 2,013 ಕ್ಯುಸೆಕ್‌ ನೀರನ್ನು ಹರಿಸಲಾಗುತ್ತಿದೆ ಎಂದು ನೀರಾವರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಂಡ್ಯ(ಆ.16): ತಮಿಳುನಾಡು ಸರ್ಕಾರ ಸುಪ್ರೀಂಕೋರ್ಚ್‌ ಮೊರೆ ಹೋದ ಬೆನ್ನಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ಕೆಆರ್‌ಎಸ್‌ ಜಲಾಶಯದಿಂದ ಬಿಡುಗಡೆ ಮಾಡಲಾಗುವ ನೀರಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಇದರ ಜೊತೆಯಲ್ಲೇ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರು ಅರೆಖುಷ್ಕಿ ಬೆಳೆಗಳನ್ನು ಬೆಳೆಯಲು ಅನುಕೂಲವಾಗುವಂತೆ ನಾಲೆಗಳಿಗೂ ನೀರು ಹರಿಸಲಾಗುತ್ತಿದೆ.

ಪ್ರಸ್ತುತ ಕೆಆರ್‌ಎಸ್‌ನಲ್ಲಿ 112.32 ಅಡಿ ನೀರಿದೆ. ಅಣೆಕಟ್ಟೆಗೆ 3,960 ಕ್ಯುಸೆಕ್‌ ನೀರಿನ ಒಳಹರಿವಿದ್ದರೆ, ಜಲಾಶಯದಿಂದ 7,256 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಇದರಲ್ಲಿ ನದಿಗೆ 5,243 ಕ್ಯುಸೆಕ್‌, ನಾಲೆಗಳಿಗೆ 2,013 ಕ್ಯುಸೆಕ್‌ ನೀರನ್ನು ಹರಿಸಲಾಗುತ್ತಿದೆ ಎಂದು ನೀರಾವರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇದರ ನಡುವೆ ರಾತ್ರಿ ವೇಳೆ ನದಿಗೆ ನೀರು ಹರಿಸುವ ಪ್ರಮಾಣವನ್ನು ಹೆಚ್ಚಿಸುವ ಅಧಿಕಾರಿಗಳು ಬೆಳಗಿನ ವೇಳೆಗೆ ಸಾಮಾನ್ಯ ಸ್ಥಿತಿಗೆ ತಂದು ನಿಲ್ಲಿಸುವ ನಿದರ್ಶನಗಳು ಹಿಂದಿನಿಂದಲೂ ನಡೆದುಕೊಂಡು ಬಂದಿವೆ.

ದೇವರ ದರ್ಶನಕ್ಕೆ ಬಂದ ಜೆಡಿಎಸ್‌ ಕಾರ್ಯಕರ್ತನ ಮೇಲೆ ಅಟ್ಯಾಕ್: ಮಚ್ಚು ಬೀಸೋ ಮುಂಚೆ ಕಾನ್ಸಟೇಬಲ್‌ ಹಾಜರ್..!

ಇದು ಅನಿವಾರ್ಯ- ಚೆಲುವರಾಯಸ್ವಾಮಿ:

ತಮಿಳುನಾಡು ಸರ್ಕಾರ ಸುಪ್ರೀಂಕೋರ್ಚ್‌ ಮೊರೆ ಹೋದ ಹಿನ್ನೆಲೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆ ಮೇರೆಗೆ ತಮಿಳುನಾಡಿಗೆ ನೀರು ಹರಿಸುವುದು ಅನಿವಾರ್ಯವಾಗಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ನೀರು ಬಿಡೋದಿಲ್ಲ

ತಮಿಳುನಾಡಿನವರು ನೀರು ಬಿಡುವಂತೆ ಸುಪ್ರೀಂಕೋರ್ಚ್‌ಗೆ ಮನವಿ ಮಾಡಿದ್ದಾರೆ. ಆದರೆ, ರಾಜ್ಯದಲ್ಲಿ ಮಳೆ ಕೊರತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡಲು ಸಾಧ್ಯವೇ ಇಲ್ಲ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜ್‌ ತಿಳಿಸಿದ್ದಾರೆ.