ಬಿಲ್ ಪಾವತಿಸಿದೆ ಸಂಘರ್ಷಕ್ಕೆ ನಿಂತರೆ ನಾವು ರೆಡಿ: ಸಿದ್ದು ಸರ್ಕಾರಕ್ಕೆ ಕೆಂಪಣ್ಣ ಖಡಕ್ ಎಚ್ಚರಿಕೆ
ಕಳೆದ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮಾಡಿದ ಬಗ್ಗೆ ದಾಖಲೆ ಇದ್ದ ಕಾರಣ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಪಾಲರ ಜೊತೆ ಚರ್ಚೆ ನಡೆಸಲು ಅವಕಾಶ ಕೇಳಿದ್ದೆವು. ಯಾರೂ ಸ್ಪಂದಿಸದ ಕಾರಣ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರು ಕೊಡಬೇಕಾಯಿತು ಎಂದ ಕೆಂಪಣ್ಣ
ಚಿಕ್ಕಬಳ್ಳಾಪುರ(ಜು.15): ಮೂರು ವರ್ಷಗಳಿಂದ ರಾಜ್ಯದ ಗುತ್ತಿಗೆದಾರರ ಬಿಲ್ ಬಾಕಿ ಮೊತ್ತ ಹಾಗೆ ಇದೆ. ಪ್ರಸ್ತುತ ರಾಜ್ಯದಲ್ಲಿ 25 ಸಾವಿರ ಕೋಟಿ ಮೊತ್ತದ ಬಿಲ್ ಪೆಂಡಿಂಗ್ ಇದೆ. ಗುತ್ತಿಗೆದಾರರ ಎಲ್ಲ ಬಿಲ್‌ಗಳ ಹಣವನ್ನು ಬಿಡುಗಡೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಇದನ್ನು ಬಿಟ್ಟು ಸಂಘರ್ಷಕ್ಕೆ ನಿಂತರೆ ನಾವೂ ಸರ್ಕಾರದ ಜೊತೆ ಸಂಘರ್ಷಕ್ಕೆ ಸಿದ್ದರಾಗಿದ್ದೇವೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಎಚ್ಚರಿಕೆ ನೀಡಿದ್ದಾರೆ.
ಶಿಡ್ಲಘಟ್ಟ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ರಾಜ್ಯದಲ್ಲಿ 25 ಸಾವಿರ ಕೋಟಿ ಮೊತ್ತದ ಬಿಲ್ ಪೆಂಡಿಂಗ್ ಇದೆ. ಸಣ್ಣ ನೀರಾವರಿ ಇಲಾಖೆಯಲ್ಲಿ ಅತಿ ಹೆಚ್ಚು ಬಿಲ್ ಬಾಕಿ ಇದ್ದು, ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಯವರಿಗೆ ಲೆಕ್ಕವೇ ಸರಿಯಾಗಿ ಸಿಗುತ್ತಿಲ್ಲ. ಕಳೆದ ಬಿಜೆಪಿ ಸರ್ಕಾರದಲ್ಲಿ ಒಂದು ಕೋಟಿ ರೂ.ಕೆಲಸಕ್ಕೆ ನೂರು ಕೋಟಿ ರೂ.ಬಿಲ್ ಮಾಡಿಸಿದ್ದಾರೆ. ಒಬ್ಬ ಗುತ್ತಿಗೆದಾರನಿಗೆ 700 ಕೋಟಿ ಬಾಕಿ ಮೊತ್ತ ಕೊಡಬೇಕಾಗಿದೆ. ಈಗಿನ ಸರ್ಕಾರದ ಬಗ್ಗೆ ಯಾರೂ ಭ್ರಷ್ಟಾಚಾರದ ಆರೋಪ ಮಾಡಿಲ್ಲ. ದೂರುಗಳು ಬಂದರೆ ಕಾಂಗ್ರೆಸ್ ಸರ್ಕಾರದ ವಿರುದ್ದವೂ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಸಚಿವರು ರೇಟ್ ಫಿಕ್ಸ್ ಮಾಡುತ್ತಿದ್ದಾರೆ, ಎಲ್ಲಿದ್ದೀರಿ ಕೆಂಪಣ್ಣ: ಬಸವರಾಜ ಬೊಮ್ಮಾಯಿ
ಕಳೆದ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮಾಡಿದ ಬಗ್ಗೆ ದಾಖಲೆ ಇದ್ದ ಕಾರಣ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಪಾಲರ ಜೊತೆ ಚರ್ಚೆ ನಡೆಸಲು ಅವಕಾಶ ಕೇಳಿದ್ದೆವು. ಯಾರೂ ಸ್ಪಂದಿಸದ ಕಾರಣ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರು ಕೊಡಬೇಕಾಯಿತು ಎಂದರು.