Asianet Suvarna News Asianet Suvarna News

ಕೆಂಪೇಗೌಡರ ಜಯಂತಿ ವಿಚಾರದಲ್ಲಿ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಒಕ್ಕಲಿಗರ ಸಂಘ

ನಾಡಪ್ರಭು ಕೆಂಪೇಗೌಡರ ಜಯಂತಿಗೆ ಒಕ್ಕಲಿಗ ನಾಯಕರಾದ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಒಕ್ಕಲಿಗರ ಸಂಘ ತಿರುಗಿ ಬಿದ್ದಿದೆ.

Kempegowda Jayanti matter vokkaliga community turned against congress government sat
Author
First Published Jun 26, 2024, 8:18 PM IST | Last Updated Jun 26, 2024, 8:18 PM IST

ಬೆಂಗಳೂರು (ಜೂ.26): ರಾಜ್ಯದಲ್ಲಿ ಅದ್ಧೂರಿಯಾಗಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದ್ದರೂ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಆಹ್ವಾನಿ ನೀಡದ ಸರ್ಕಾರದ ವಿರುದ್ಧ ಸ್ವತಃ ಒಕ್ಕಲಿಗರ ಸಂಘವೇ ತಿರುಗಿಬಿದ್ದಿದೆ.

ಹೌದು, ಈ ಬಾರಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸರ್ಕಾರದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರ ಸಾಧನೆಯನ್ನು ರಾಜ್ಯದ ಎಲ್ಲ ಮಕ್ಕಳಿಗೂ ತಿಳಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಚರ್ಚಾ ಸ್ಪರ್ಧೆ ಏರ್ಪಡಿಸಲು ಬಿಬಿಎಂಪಿ ವತಿಯಿಂದ 2.40 ಕೋಟಿ ರೂ. ಖರ್ಚು ಮಾಡಿಸಲಾಗುತ್ತಿದೆ. ಜೊತೆಗೆ, ರಾಜ್ಯ ಸರ್ಕಾರದಿಂದ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿರುವ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಒಕ್ಕಲಿಗ ನಾಯಕರಿಗೇ ಆಹ್ವಾನ ನೀಡಿಲ್ಲ ಎಂಬ ದೂರು ಕೇಳಿಬಂದಿದೆ.

ಕೆಂಪೇಗೌಡ ಜಯಂತಿ ಹೆಸರಲ್ಲಿ ಸೇಡಿನ ರಾಜಕಾರಣ..? ಶಿಷ್ಟಾಚಾರ ಮರೆಯಿತಾ ಕಾಂಗ್ರೆಸ್ ಸರ್ಕಾರ..?

ಈಗಾಗಲೇ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಸಿದ್ಧಪಡಿಸಲಾದ ಆಹ್ವಾನ ಪತ್ರಿಕೆಯಲ್ಲಿ ಒಕ್ಕಲಿಗ ನಾಯಕರಾದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೆಸರಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದಿಂದಲೇ ಸರ್ಕಾರದ ವಿರುದ್ಧ ತಿರುಗಿ ಬೀಳಲಾಗಿದೆ.  ಈ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದಿಂದ ಸರ್ಕಾರದ ವಿರುದ್ಧ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಸರ್ಕಾರದ ನಡವಳಿಕೆಯನ್ನ ಖಂಡಿಸಿ ಪತ್ರಿಕಾ ಪ್ರಕಟಣೆಯಲ್ಲಿ ಹೀಗಿದೆ..
ರಾಜ್ಯ ಸರ್ಕಾರದ ವತಿಯಿಂದ ನಾಳೆ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿಯನ್ನ ಆಚರಿಸುತ್ತಿರುವುದು ಸಂತೋಷ ವಿಚಾರ. ಆದರೆ,   ಕಾರ್ಯಕ್ರಮಕ್ಕೆ ಒಕ್ಕಲಿಗ ಸಂಘದ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನ ಆಹ್ವಾನಿಸಿಲ್ಲ. ಇದು ಒಕ್ಕಲಿಗ ಸಮುದಾಯಕ್ಕೆ ಅವಮಾನದ ವಿಚಾರವಾಗಿದೆ. ಸರ್ಕಾರದ ಈ ಧೋರಣೆಯನ್ನು ಒಕ್ಕಲಿಗರ ಸಮುದಾಯ ಮತ್ತು ರಾಜ್ಯ ಒಕ್ಕಲಿಗರ ಸಂಘವು ತೀವ್ರ ಖಂಡಿಸುತ್ತದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

Kempegowda Jayanti matter vokkaliga community turned against congress government sat

Latest Videos
Follow Us:
Download App:
  • android
  • ios