ಬೆಂಗಳೂರು :  ಕನ್ನಡ ಸಾಹಿತ್ಯ ಪರಿಷತ್‌ ನೀಡುವ 2018ನೇ ಸಾಲಿನ ಕೆಂಗಲ್‌ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಮಾಜಿ ರಾಜ್ಯಪಾಲ ಎಸ್‌.ಎಂ.ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ಅಧ್ಯಕ್ಷತೆಯಲ್ಲಿ ನಡೆದ ದತ್ತಿ ಪ್ರಶಸ್ತಿಗಳ ಆಯ್ಕೆ ಸಮಿತಿ ಸಭೆಯಲ್ಲಿ ಕೆಂಗಲ್‌ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಎಸ್‌.ಎಂ.ಕೃಷ್ಣ ಅವರನ್ನು ಹಾಗೂ 2019ನೇ ಸಾಲಿನ ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿಗೆ ಪತ್ರಕರ್ತ ಎಚ್‌.ಬಿ.ಮದನಗೌಡ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಕೆಂಗಲ್‌ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿ 25 ಸಾವಿರ ನಗದು ಹಾಗೂ ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿ 10 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿವೆ ಎಂದು ಕಸಾಪ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ತಿಳಿಸಿದ್ದಾರೆ.