Asianet Suvarna News Asianet Suvarna News

Oommen Chandy: ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ!

ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ.  ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಿನ್ಮಯ ಆಸ್ಪ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.  ಅವರು ಸಾವಿನ ಕುರಿತು ಚಾಂಡಿ ಉಮ್ಮನ್ ಪುತ್ರ ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. 

Kerala former cm oommen chandy dies in bengaluru today rav
Author
First Published Jul 18, 2023, 5:48 AM IST | Last Updated Jul 18, 2023, 9:06 AM IST

ಬೆಂಗಳೂರು (ಜು.18): ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ.  ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಿನ್ಮಯ ಆಸ್ಪ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 4.25ಕ್ಕೆಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರು ಸಾವಿನ ಕುರಿತು ಪುತ್ರ ಫೇಸ್‌ಬುಕ್ ಪೋಸ್ಟ್ ಮೂಲಕ  ತಿಳಿಸಿದ್ದಾರೆ.

ಅವರು 2004-06 ಮತ್ತು 2011-16ರ ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದರು. 

ಉಮ್ಮನ್ ಚಾಂಡಿ ಅವರು ಅಕ್ಟೋಬರ್ 31, 1943 ರಂದು ಜನಿಸಿದರು. ಅವರು ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದರು. 1967 ರಲ್ಲಿ ಅದರ ರಾಜ್ಯಾಧ್ಯಕ್ಷರಾದರು. ಅಲ್ಲಿಂದಲೇ ರಾಜಕೀಯ ಜೀವನದಲ್ಲಿ ಉನ್ನತಿಗೇರಿದ ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷರಾದರು. ಬಳಿಕ 1970 ರಲ್ಲಿ ಚುನಾವಣೆಗೆ ಸ್ಪರ್ಧಿಸಿದರು. ಕೊಟ್ಟಾಯಂ ಜಿಲ್ಲೆಯ ಪುತ್ತುಪಲ್ಲಿಯನ್ನು ಪ್ರತಿನಿಧಿಸಿ ಶಾಸಕರಾದರು. ಒಟ್ಟು 10 ಬಾರಿ ಶಾಸಕರಾಗಿದ್ದ ಉಮ್ಮನಚಾಂಡಿಯವರ ಜನಪರ ಆಡಳಿತಕ್ಕೆ ನಿದರ್ಶನ. 

ಪ್ರತಿಪಕ್ಷಗಳಿಗೆ ಸಡ್ಡು: ನಾಳೆ ದಿಲ್ಲಿಯಲ್ಲಿ ಎನ್‌ಡಿಎ ಬಲ ಪ್ರದರ್ಶನ; 30 ರಾಜಕೀಯ ಪಕ್ಷಗಳ ನಾಯಕರು ಭಾಗಿ ನಿರೀಕ್ಷೆ

 1977ರಲ್ಲಿ ಕಾರ್ಮಿಕ ಸಚಿವರು, 1981ರಲ್ಲಿ ಗೃಹ ಸಚಿವರು ಮತ್ತು 2011ರಲ್ಲಿ ಕೇರಳ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯ ಹಣಕಾಸು ಸಚಿವರೂ ಆಗಿದ್ದರು. ಉಮ್ಮನ ಚಾಂಡಿ ಯಾವಾಗಲೂ ಎ ಕೆ ಆಂಟನಿ ಪರ ನಿಂತಿದ್ದರು.

 

Latest Videos
Follow Us:
Download App:
  • android
  • ios