ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಪೆಟ್ ಸ್ಕ್ಯಾನ್ ಖರೀದಿ, ಔಷಧ ಖರೀದಿ ಸೇರಿದಂತೆ ವಿವಿಧ ಟೆಂಡರ್‌ಗಳಲ್ಲಿ ನಡೆದಿರುವ ಅಕ್ರಮ ಹಾಗೂ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಮೂರು ಮಂದಿ ಸದಸ್ಯರ ತಂಡದಿಂದ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ.
ಬೆಂಗಳೂರು (ಸೆ.19) : ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಪೆಟ್ ಸ್ಕ್ಯಾನ್ ಖರೀದಿ, ಔಷಧ ಖರೀದಿ ಸೇರಿದಂತೆ ವಿವಿಧ ಟೆಂಡರ್‌ಗಳಲ್ಲಿ ನಡೆದಿರುವ ಅಕ್ರಮ ಹಾಗೂ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಮೂರು ಮಂದಿ ಸದಸ್ಯರ ತಂಡದಿಂದ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ.
ಈ ಬಗ್ಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಟಿಪ್ಪಣಿ ಬರೆದಿರುವ ಅವರು, ಕಿದ್ವಾಯಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ, ಟೆಂಡರ್ ಹಾಗೂ ಔಷಧ ಖರೀದಿಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ ಎಂಬ ವ್ಯಾಪಕ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಒಬ್ಬ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಉತ್ತಮ ಚಾರಿತ್ರ್ಯವುಳ್ಳ ಸಹಕಾರ ಇಲಾಖೆಯ ಒಬ್ಬ ಅಧಿಕಾರಿ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ಕೂಡಲೇ ರಚನೆ ಮಾಡಿ. ಎರಡು ವಾರಗಳ ಒಳಗಾಗಿ ಪಾರದರ್ಶಕ ತನಿಖಾ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !
ಏನಿದು ಅಕ್ರಮ?
ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕರಾಗಿ ನೇಮಕವಾಗುವ ಮೊದಲೇ ನಿರ್ದೇಶಕರ ಹೆಸರಿನಲ್ಲಿ ಸಹಿ ಮಾಡಿ ಟೆಂಡರ್ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಗುರುತರ ಆರೋಪ ಹಾಲಿ ನಿರ್ದೇಶಕ ಡಾ.ವಿ. ಲೋಕೇಶ್ ಅವರ ಮೇಲೆ ಬಂದಿದೆ.
2022ರ ಆಗಸ್ಟ್‌ನಲ್ಲಿ ಸಂಸ್ಥೆಯ ಹಿಂದಿನ ನಿರ್ದೇಶಕ ಡಾ.ಸಿ. ರಾಮಚಂದ್ರ ಅವರ ಅವಧಿ ಮುಗಿದಿತ್ತು. 2022ರ ಅಕ್ಟೋಬರ್ 17ರಂದು ರೇಡಿಯೇಷನ್ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ.ವಿ. ಲೋಕೇಶ್ ಅವರನ್ನು ನೇಮಿಸಿ ಆದೇಶ ಹೊರಡಿಸಿತ್ತು.
ಆದರೆ, ಪೆಟ್ ಸ್ಕ್ಯಾನ್ ನಿರ್ವಹಣೆ ಹಾಗೂ ಕಾರ್ಯಾಚರಣೆಗೆ ಸಂಬಂಧಿಸಿದಂತೆ 2022ರ ಆಗಸ್ಟ್ 18ರಂದು ಬೆಂಗಳೂರು ಮೆಡಿಕಲ್ ಸಿಸ್ಟಮ್ಸ್ ಸಂಸ್ಥೆಗೆ ಕಾರ್ಯಾದೇಶ ನೀಡಲಾಗಿತ್ತು.
ಇದಕ್ಕೆ ಡಾ.ವಿ. ಲೋಕೇಶ್ ಸಹಿ ಇದೆ. ಇದರಿಂದ ಟೆಂಡರ್ ಪ್ರಕ್ರಿಯೆ ಬಗ್ಗೆ ಹಾಗೂ ರೋಗಿಗಳ ಚಿಕಿತ್ಸೆಯಲ್ಲೂ ನಿರ್ಲಕ್ಷ್ಯದ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡಿದ್ದಾರೆ.
ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಹಾ ಟ್ರೇ ಹಿಡಿದು ಸರ್ವರ್ ಆದ ಇಸ್ರೋ ಚಂದ್ರಯಾನ ವಿಜ್ಞಾನಿ!
ನನ್ನಿಂದ ಯಾವುದೇ ಅಕ್ರಮ ಆಗಿಲ್ಲ:
ಈ ಬಗ್ಗೆ ಡಾ.ವಿ. ಲೋಕೇಶ್ ಅವರು ಸ್ಪಷ್ಟನೆ ನೀಡಿದ್ದು, ಹಿಂದಿನ ನಿರ್ದೇಶಕರು ಟೆಂಡರ್‌ಗೆ ಕಾರ್ಯಾದೇಶ ನೀಡಿದ್ದರು. ಇದಕ್ಕೆ 2022ರ ಅಕ್ಟೋಬರ್‌ನಲ್ಲಿ ಎಐಆರ್‌ಬಿ ಅನುಮೋದನೆ ನೀಡಿತ್ತು. ಆದ್ದರಿಂದ ಟೆಂಡರ್ ಪ್ರತಿಗೆ ಸಹಿ ಹಾಕಲಾಗಿದೆ. ಇದರಲ್ಲಿ ಅನಗತ್ಯವಾಗಿ ಗೊಂದಲ ಸೃಷ್ಟಿಸಲಾಗಿದೆ ಎಂದು ತಮ್ಮ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದಾರೆ.
