Asianet Suvarna News Asianet Suvarna News

Kittur Karnataka| ರಾಜ್ಯದ 7 ಜಿಲ್ಲೆಗಳು ಇನ್ನು ಕಿತ್ತೂರು ಕರ್ನಾಟಕ!

* ಮುಂಬೈ ಕರ್ನಾಟಕದ ಜಿಲ್ಲೆಗಳಿಗೆ ಮರುನಾಮಕರಣ

* 7 ಜಿಲ್ಲೆಗಳು ಇನ್ನು ಕಿತ್ತೂರು ಕರ್ನಾಟಕ

* ಬಹುದಿನದ ಬೇಡಿಕೆ ಈಡೇರಿಸಿದ ಸಿಎಂ ಬೊಮ್ಮಾಯಿ

Kittur Karnataka Mumbai Karnataka region consisting 7 districts has a new name now pod
Author
Bangalore, First Published Nov 9, 2021, 6:53 AM IST

ಬೆಂಗಳೂರು(ನ.09): ಹೈದರಾಬಾದ್‌-ಕರ್ನಾಟಕ (Hyderabad Karnataka) ಭಾಗವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ ಮಾದರಿಯಲ್ಲಿಯೇ ಮುಂಬೈ-ಕರ್ನಾಟಕ (Mumbai Karnataka) ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ಮೂಲಕ ಮುಂಬೈ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿಕೆಯಾದಂತಾಗಿದೆ.

ಸೋಮವಾರ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ (JC Madhuswamy), ‘ಮುಂಬೈ ಕರ್ನಾಟಕ ಎಂದು ಕರೆಯುತ್ತಿದ್ದ ಬೆಳಗಾವಿ , ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಉತ್ತರ ಕನ್ನಡ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಇನ್ನು ಮುಂದೆ ಕಿತ್ತೂರು ಕರ್ನಾಟಕ (Kittur Karnataka) ಪ್ರದೇಶ ಎಂದು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ’ ಎಂದು ಹೇಳಿದರು.

ಹೈದರಾಬಾದ್‌-ಕರ್ನಾಟಕ ಪ್ರಾಂತ್ಯವನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಬಳಿಕ ಮುಂಬೈ-ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂದು ಆ ಭಾಗದ ಜನರು ಒತ್ತಾಯಿಸಿದ್ದರು. ಆಗಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡುವ ಬಗ್ಗೆ ಆಶ್ವಾಸನೆ ನೀಡಿದ್ದರು. ಇತ್ತೀಚೆಗೆ ಕಿತ್ತೂರು ಉತ್ಸವದಲ್ಲಿ ಹಾಗೂ ಉಪಚುನಾವಣೆ ಪ್ರಚಾರದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraj Bommai) ಸಹ ಮುಂಬೈ ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡುವುದಾಗಿ ಭರವಸೆ ನೀಡಿದ್ದರು. ಅಂತೆಯೇ ಸಚಿವ ಸಂಪುಟದಲ್ಲಿ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಒಪ್ಪಿಗೆ ನೀಡಿದೆ.

ಸಂಭ್ರಮಾಚರಣೆ:

ಇನ್ನು ಹೋರಾಟಗಾರರ ಬಹುಕಾಲದ ಬೇಡಿಕೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಈಡೇರಿಸಿದ್ದಾರೆ. ಈ ಹಿನ್ನೆಲೆ ಸಂಭ್ರಮಾಚರಣೆ ಎಲ್ಲಾ ಕಡೆಗಳಲ್ಲಿ ನಡೆಯುತ್ತಿದೆ. ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಶಿವರಾಮೇಗೌಡ ಬಣ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ವಿಜಯೋತ್ಸವ‌ ಆಚರಸಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ಘೋಷಣೆ ಕೂಗಿದ್ದಾರೆ. ಕರವೇ ಮುಖಂಡ ‌ಮಹಾಂತೇಶ ರಣಗಟ್ಟಿಮಠ‌, ವಾಜೀದ್ ಸೇರಿ ಅನೇಕರು ಇದ್ದರು.

ಇತ್ತ ಕನ್ನಡ ‌ಪರ‌ ಸಂಘಟನೆಗಳು ರಾಣಿ ಚನ್ನಮ್ಮ ‌ಪ್ರತಿಮೆಗೆ ಮಾಲಾರ್ಪಣೆ ‌ಮಾಡಿ, ಪಟಾಕಿ ಸಿಡಿಸಿ, ಸಿಹಿ‌ ಹಂಚಿ ಸಂಭ್ರಮಿಸಿದ್ದಾರೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ ‌ಶಿವಾಚಾರ್ಯ ಸ್ವಾಮಿಜಿ,‌ ಅಶೋಕ‌ ಚಂದರಗಿ,‌ ಮಹಾದೇವ ತಳವಾರ,‌‌ ದೀಪಕ ಗುಡಗನಟ್ಟಿ, ಸುರೇಶ ತಳವಾರ, ಶಂಕರ ಬಾಗೇವಾಡಿ‌ ಹಾಗೂ ವೀರೇಂದ್ರ ‌ಸೇರಿ ಅನೇಕ ಕಾರ್ಯಕರ್ತರು ಹಾಜರಿದ್ದರು.

ರಾಜ್ಯದಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶವು ಕಲ್ಯಾಣ ಕರ್ನಾಟಕ ಎಂದು ಆಗಿದೆ. ಈಗ ಮುಂಬಯಿ ಕರ್ನಾಟಕ ಪ್ರದೇಶವು ಕಿತ್ತೂರು ಕರ್ನಾಟಕ ಆಗಿ ಬದಲಾವಣೆ ಆಗಿರೋದು ಎಲ್ಲರ ಸಂತಸಕ್ಕೆ ಕಾರಣವಾಗಿದೆ.

ಕೆಲ ದಿನಗಳ ಹಿಂದಷ್ಟೇ ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು, ಮುಂಬೈ-ಕರ್ನಾಟಕ ಭಾಗಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡುವ ತೀರ್ಮಾನವನ್ನು ಸಚಿವ ಸಂಪುಟದಲ್ಲಿ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಈಗ ತನ್ನ ಮಾತಿನಂತೆ ಮುಂಬೈ ಕರ್ನಾಟಕ ಭಾಗಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಿದ್ದಾರೆ. ಈ ಮೂಲಕ ಮುಂಬೈ ಕರ್ನಾಟಕ ಭಾಗದ ಜನರ ಬಹು ದಶಕಗಳ ಬೇಡಿಕೆ ಈಡೇರಿದಂತಾಗಿದೆ.

ಯಾವ್ಯಾವ ಜಿಲ್ಲೆ?

* ಬೆಳಗಾವಿ (Brlagavi)

* ಧಾರವಾಡ (Dharwad)

* ವಿಜಯಪುರ (Vijayapura)

* ಬಾಗಲಕೋಟೆ (bagalkot)

* ಗದಗ (gadaga)

* ಉತ್ತರ ಕನ್ನಡ (Uttara Kannada)

* ಹಾವೇರಿ (Haveri)

Follow Us:
Download App:
  • android
  • ios