Asianet Suvarna News Asianet Suvarna News

KNNL Recruitment 2022: ಕರ್ನಾಟಕ ನೀರಾವರಿ ನಿಗಮದಲ್ಲಿನ ಸೆಕ್ರೆಟರಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ಖಾಲಿ  ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.   ಜನವರಿ 27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 

KNNL Recruitment 2022 Apply Offline for Company Secretary posts gow
Author
Bengaluru, First Published Jan 12, 2022, 9:40 PM IST

ಬೆಂಗಳೂರು (ಜ.12): ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ಖಾಲಿ (Karnataka Neeravari Nigam Limited -KNNL) ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.   ಕಂಪನಿ ಕಾರ್ಯದರ್ಶಿ(Company Secretary) ಒಟ್ಟು 2 ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.  ಎರಡು ವರ್ಷಗಳ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ knnlindia.com ಗೆ ಭೇಟಿ ನೀಡಬಹುದು. ಆಯ್ಕೆಯಾದವರು ಧಾರವಾಡ ಕೇಂದ್ರಕ್ಕೆ  ಕರ್ತವ್ಯ ನಿರ್ವಹಿಸಬೇಕಾಗುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಕಾನೂನು ಪದವಿ ಪಡೆದಿರಬೇಕು.

ಅರ್ಹತೆ: ಕಂಪನಿ ಸೆಕ್ರೆಟರಿ ಗ್ರೇಡ್ 1- ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾದ ಸದಸ್ಯ ಆಗಿರಬೇಕು.
ಕಂಪನಿ ಸೆಕ್ರೆಟರಿ ಗ್ರೇಡ್-2- ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾದ ಅಸೋಸಿಯೇಟ್ ಸದಸ್ಯ ಆಗಿರಬೇಕು.

South Central Railway Recruitment 2022: ಕ್ರೀಡಾ ಕೋಟದಡಿ SSLC, PUC ಪಾಸಾದವರಿಗೆ ಉದ್ಯೋಗವಕಾಶ

ಉದ್ಯೋಗ ಅನುಭವ:
ಕಂಪನಿ ಸೆಕ್ರೆಟರಿ ಗ್ರೇಡ್ 1- ಕನಿಷ್ಠ 15 ವರ್ಷಗಳ ಅನುಭವ
ಕಂಪನಿ ಸೆಕ್ರೆಟರಿ ಗ್ರೇಡ್-2- ಕನಿಷ್ಠ 10 ವರ್ಷಗಳ ಅನುಭವ

ವಯೋಮಿತಿ:
ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಜನವರಿ 27, 2022ಕ್ಕೆ 45 ವರ್ಷ ಮೀರಿರಬಾರದು. ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ:
ಕಂಪನಿ ಸೆಕ್ರೆಟರಿ ಗ್ರೇಡ್ 1- ಮಾಸಿಕ ₹ 97,100-1,41,300
ಕಂಪನಿ ಸೆಕ್ರೆಟರಿ ಗ್ರೇಡ್-2- ಮಾಸಿಕ ₹ 90,500-1,23,300

Fact Check: ಭಾರತೀಯ ರೈಲ್ವೇಯ ಆರ್‌ಪಿಎಫ್ ಕಾನ್ಸ್‌ಟೇಬಲ್ ನೇಮಕಾತಿ 2022 ನೋಟೀಸ್ ನಕಲಿ!

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು.
ವ್ಯವಸ್ಥಾಪಕ ನಿರ್ದೇಶಕರು
ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್
ರಿಜಿಸ್ಟರರ್ಡ್​ ಆಫೀಸ್
4ನೇ ಮಹಡಿ
ಕಾಫಿ ಬೋರ್ಡ್ ಬಿಲ್ಡಿಂಗ್
ನಂ.1, ಡಾ,ಬಿ.ಆರ್​.ಅಂಬೇಡ್ಕರ್ ವೀಧಿ
ಬೆಂಗಳೂರು-560001

BANK OF BARODA RECRUITMENT 2022: ಪದವೀಧರರಿಗೆ ಸುವರ್ಣಾವಕಾಶ, ಇಂದೇ ಅರ್ಜಿ ಸಲ್ಲಿಸಿ

ಸಂಪತ್ತು ನಿರ್ವಹಣಾ ಸೇವೆಗಳ ವಿಭಾಗದಲ್ಲಿ ಹುದ್ದೆಗಳ ಭರ್ತಿಗೆ ಕರೆ ನೀಡಿದ BOB: ಬ್ಯಾಂಕ್ ಆಫ್ ಬರೋಡಾ (Bank of Baroda) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಗುತ್ತಿಗೆ ಆಧಾರದ ಮೇಲೆ ಸಂಪತ್ತು ನಿರ್ವಹಣಾ ಸೇವೆಗಳ (Wealth Management Services) ವಿಭಾಗದಲ್ಲಿ ಖಾಲಿ ಇರುವ 58  ಹುದ್ದೆಗಳನ್ನು ತುಂಬಲು  ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.  ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜನವರಿ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.  ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ bankofbaroda.in ಗೆ ಭೇಟಿ ನೀಡಿ.

BANK OF BARODA RECRUITMENT 2022: ಪದವೀಧರರಿಗೆ ಸುವರ್ಣಾವಕಾಶ, ಇಂದೇ ಅರ್ಜಿ ಸಲ್ಲಿಸಿ

Follow Us:
Download App:
  • android
  • ios