Kodagu rains: ಭಾರೀ ಮಳೆಗೆ ಕುಸಿದು ಬಿದ್ದ ಕಂಬ; ವಿದ್ಯುತ್ ತಂತಿ ತುಳಿದು 6 ಜಾನುವಾರು ದುರ್ಮರಣ!
ಕೊಡಗು ಜಿಲ್ಲೆಯಲ್ಲಿ ಮಳೆ ಮತ್ತೆ ಬಿರುಸು ಪಡೆದುಕೊಂಡಿದ್ದು, ಇಂದು ಸಂಜೆ ಸುರಿದ ಭಾರೀ ಮಳೆಗೆ ವಿದ್ಯುತ್ ತಂತಿ ತುಂಡಾಗಿ 6 ಜಾನುವಾರುಗಳು ದುರ್ಮರಣಕ್ಕೀಡಾದ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ.
ಕೊಡಗು (ಜು.29): ಕೊಡಗು ಜಿಲ್ಲೆಯಲ್ಲಿ ಮಳೆ ಮತ್ತೆ ಬಿರುಸು ಪಡೆದುಕೊಂಡಿದ್ದು, ಇಂದು ಸಂಜೆ ಸುರಿದ ಭಾರೀ ಮಳೆಗೆ ವಿದ್ಯುತ್ ತಂತಿ ತುಂಡಾಗಿ 6 ಜಾನುವಾರುಗಳು ದುರ್ಮರಣಕ್ಕೀಡಾದ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ನಟರಾಜ್ ಎಂಬುವವರಿಗೆ ಸೇರಿದ ಜಾನುವಾರುಗಳು. ಗದ್ದೆಯಿಂದ ಸಂಜೆ ಕೊಟ್ಟಿಗೆ ಬರುತ್ತಿದ್ದ ವೇಳೆ ಧಾರಾಕಾರ ಸುರಿಯುತ್ತಿದ್ದ ಮಳೆಗೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಜಾನುವಾರುಗಳ ಮೇಲೆ ಬಿದ್ದಿದೆ. ಇದರಿಂದ ವಿದ್ಯುತ್ ಪ್ರವಹಿಸಿ ಜಾನುವಾರುಗಳು ಸ್ಥಳದಲ್ಲೇ ಒದ್ದಾಡಿ ಮೃತಪಟ್ಟಿವೆ. ಆರು ಜಾನುವಾರುಗಳನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದಾರೆ. ಸತ್ತ ಜಾನುವಾರುಗಳ ಮುಂದೆ ಕಣ್ಣೀರು ಹಾಕುತ್ತಿರುವ ರೈತ.
ಕೊಡಗು: ರಸ್ತೆ, ಕಟ್ಟಡಗಳಿಗೆ ನುಗ್ಗಿದ ಕಾವೇರಿ ಪ್ರವಾಹದ ನೀರು, ಜನಜೀವನ ಅಸ್ತವ್ಯಸ್ತ..!
ಸಂಜೆಯಿಂದಲೇ ಅರ್ಭಟಿಸುತ್ತಿರುವ ಮಳೆಗೆ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ಅನಾಹುತ ಸಂಭವಿಸಿವೆ. ವಿರಾಜಪೇಟೆ ನಗರದಲ್ಲಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ದಿಢೀರ್ ಸುರಿದ ಮಳೆಯಿಂದ ವಾಹನ ಸವಾರರು ಪರದಾಡುವಂತಾಯಿತು.
ಶಾಲೆಗಳಿಗೆ ರಜೆ ಘೋಷಣೆ.
ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತವಾಗಿ ಪ್ರಾಥಮಿಕ, ಪ್ರೌಢ ಶಿಕ್ಷಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಕೊಡಗು ಡಿಡಿಪಿಐ ರಂಗಧಾಮಪ್ಪ ಮಾಹಿತಿ ನೀಡಿದ್ದಾರೆ.