Former CRPF soldier death: ಕೊಡಗಿನ ಸೋಮವಾರಪೇಟೆಯಲ್ಲಿ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಾಜಿ ಸಿಆರ್‌ಪಿಎಫ್ ಯೋಧರೊಬ್ಬರು ಸಜೀವ ದಹನಗೊಂಡಿದ್ದಾರೆ. ಕಾಲು ಕಳೆದುಕೊಂಡಿದ್ದ 64 ವರ್ಷದ ವೆಂಕಟೇಶ್ ಅವರು, ಬೆಂಕಿ ಹೊತ್ತಿಕೊಂಡಾಗ ಮನೆಯಿಂದ ಹೊರಬರಲಾಗದೆ ದುರಂತ ಅಂತ್ಯ ಕಂಡಿದ್ದಾರೆ.

ಬೆಂಕಿ ಆಕಸ್ಮಿಕದಲ್ಲಿ ಮಾಜಿ ಯೋಧ ಸಾವು

ಬೆಂಗಳೂರು: ಆಕಸ್ಮಿಕವಾಗಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಾಜಿ CRPFಯೋಧರೊಬ್ಬರು ಸಜೀವ ದಹನಗೊಂಡ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ತೋಳುರುಶೆಟ್ಟಳ್ಳಿಲ್ಲಿ ಘಟನೆ ನಡೆದಿದ್ದು, 64 ವರ್ಷದ ಹೆಚ್.ಎ.ವೆಂಕಟೇಶ್ ಮೃತ ಮಾಜಿ ಯೋಧ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮನೆಯಲ್ಲೇ ತೋಟದ ಕೆಲಸಗಳಿಗೆ ಬಳಸುವ ಯಂತ್ರಗಳಿಗೆಂದು ತಂದಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ವ್ಯಾಪಿಸಿದೆ. ವೆಂಕಟೇಶ್ ಅವರು ಗ್ಯಾಂಗ್ರಿನ್ ಸಮಸ್ಯೆಯಿಂದಾಗಿ ಒಂದು ಕಾಲನ್ನು ಕಳೆದುಕೊಂಡಿದ್ದರಿಂದ ತಕ್ಷಣ ಮನೆಯಿಂದ ಹೊರಬರಲು ಸಾಧ್ಯವಾಗದೆ ಬೆಂಕಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಾಣಂತನಕ್ಕೆ ಹೋದ ಹೆಂಡ್ತಿ: ಊಟಕ್ಕೆಂದು ಹೊಟೇಲ್‌ಗೆ ಹೋದಾಗ ಆಕಸ್ಮಿಕವಾಗಿ ಕಾಲ್ತುಳಿದಿದ್ದಕ್ಕೆ ಯುವಕನ ಕೊಲೆ

ಬೆಂಕಿಯ ತೀವ್ರತೆಗೆ ಮನೆಯ ಒಂದು ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಸ್ಥಳೀಯರು ಮನೆಯ ಮೇಲಿನಿಂದ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟರಲ್ಲಾಗಲೇ ವೆಂಕಟೇಶ್ ಅವರು ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಸೋಮವಾರಪೇಟೆ ವೃತ್ತ ನಿರೀಕ್ಷಕ ಮುದ್ದು ಮಾದೇವ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಇರ್ವರೂ ಪುತ್ರಿಯರನ್ನು ಅಗಲಿದ್ದಾರೆ.

ಇದನ್ನೂ ಓದಿ: 35 ಸಾವಿರದ ಇವಿ ಬೈಕ್‌ಗೆ 1.50 ಲಕ್ಷ ಸಾಲ ಮಾಡಿಸಿದ ಶೋ ರೂಮ್: ಗ್ರಾಹಕರ ಆಧಾರ್ ಕಾರ್ಡ್ ಪಾನ್ ಕಾರ್ಡ್ ಪಡೆದು ಅವರಿಗೆ ತಿಳಿಯದೇ ಸಾಲ