ಕೊಡುಗು ಜಿಲ್ಲೆ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಹೆಣ್ಣೂರು ಠಾಣೆ ಪೊಲೀಸರು, ಮೃತನ ಮೊಬೈಲ್‌ ಹಾಗೂ ಡೆತ್‌ನೋಟ್‌ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.

ಬೆಂಗಳೂರು (ಏ.6): ಕೊಡುಗು ಜಿಲ್ಲೆ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಹೆಣ್ಣೂರು ಠಾಣೆ ಪೊಲೀಸರು, ಮೃತನ ಮೊಬೈಲ್‌ ಹಾಗೂ ಡೆತ್‌ನೋಟ್‌ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.

ವಿನಯ್ ಮೊಬೈಲ್‌ನಲ್ಲಿರುವ ದತ್ತಾಂಶ ಹಾಗೂ ಡಿಲೀಟ್‌ ಆಗಿರುವ ದತ್ತಾಂಶವನ್ನು ತಜ್ಞರು ರಿಟ್ರೈವ್ ಮಾಡಲಿದ್ದಾರೆ. ಅಂತೆಯೇ ವಿನಯ್‌ನ ಡೆತ್‌ನೋಟ್‌ ಬರಹದ ಅಸಲಿಯತ್ತನ್ನೂ ಪರೀಕ್ಷಿಸಿ ದೃಢೀಕರಿಸಲಿದ್ದಾರೆ.

ಇನ್ನು ಡೆತ್‌ನೋಟ್‌ನಲ್ಲಿ ವಿನಯ್‌ ತನ್ನ ಆತ್ಮಹತ್ಯೆಗೆ ಕೊಡಗು ಜಿಲ್ಲೆಯ ಕಾಂಗ್ರೆಸ್‌ ಶಾಸಕರಾದ ವಿರಾಜಪೇಟೆಯ ಎ.ಎಸ್‌.ಪೊನ್ನಣ್ಣ, ಮಡಿಕೇರಿಯ ಮಂಥರ್‌ ಗೌಡ ಹಾಗೂ ಕೊಡಗು ಜಿಲ್ಲೆ ಕಾಂಗ್ರೆಸ್‌ ಮುಖಂಡ ತೆನ್ನೇರಾ ಮೆಹೀನಾ ಹಾಗೂ ಇತರರ ಕಿರಕುಳವೇ ಕಾರಣ ಎಂದು ಆರೋಪಿಸಿದ್ದಾರೆ. ಸದ್ಯ ಎಫ್‌ಐಆರ್‌ನಲ್ಲಿ ಕೊಡಗು ಜಿಲ್ಲೆ ಕಾಂಗ್ರೆಸ್‌ ಮುಖಂಡ ತೆನ್ನೇರಾ ಮೊಹೀನಾ ಹೆಸರು ಮಾತ್ರ ಉಲ್ಲೇಖವಾಗಿದೆ. ಹೀಗಾಗಿ ಶೀಘ್ರದಲ್ಲೇ ಅವರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಇದನ್ನೂ ಓದಿ: ವಿನಯ್ ಸೋಮಯ್ಯ ಹೆಸರು ಹೇಳಿದ್ರಾ?

ಪ್ರಕರಣದ ಹಿನ್ನೆಲೆ:

ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಪತ್ನಿ ಮತ್ತು ಮಗುವಿನ ಜತೆಗೆ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನೆಲೆಸಿದ್ದರು. ನಾಗವಾರದ ಎಚ್‌ಬಿಆರ್‌ ಲೇಔಟ್‌ನ ಖಾಸಗಿ ಕಂಪನಿಯಲ್ಲಿ ಆಪರೇಷನ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ವಿನಯ್‌ ಶುಕ್ರವಾರ ಮುಂಜಾನೆ ಸುಮಾರು 4.30ಕ್ಕೆ ತಾನು ಕೆಲಸ ಮಾಡುವ ಕಂಪನಿಯ ಗೋದಾಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಮೃತನ ಸಹೋದರ ಜೀವನ್‌ ನೀಡಿದ ದೂರಿನ ಮೇರೆಗೆ ಹೆಣ್ಣೂರು ಠಾಣೆ ಪೊಲೀಸರು ತೆನ್ನೀರಾ ಮೆಹೀನಾ ಸೇರಿ ಇತರರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ, ಬೆದರಿಕೆ, ಕಿರುಕುಳ ಆರೋಪದಡಿ ಎಫ್‌ಐಆರ್‌ ದಾಖಲಿಸಿದ್ದರು.

ಬಿಜೆಪಿ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಕಾಂಗ್ರೆಸ್‌ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ಕೊಡಗಿನಲ್ಲಿ ಪ್ರತಿಭಟನೆಕುಶಾಲನಗರ: ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರದಲ್ಲಿ ಶನಿವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಡಿವೈಎಸ್ ಪಿ ಕಚೇರಿ ಮುಂಭಾಗದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ವಿನಯ್ ಸಾವಿಗೆ ಆಕ್ರೋಶ ವ್ಯಕ್ತಪಡಿಸಲಾಯಿತು.

ಇದನ್ನೂ ಓದಿ:

ಸಿಬಿಐಗೆ ಕೊಡಿ ಬಿಜೆಪಿ ಕಾರ್ಯಕರ್ತ ವಿನಯ್‌ ಅವರಿಗೆ ಕೊಡಗಿನ ಇಬ್ಬರು ಕಾಂಗ್ರೆಸ್‌ ಶಾಸಕರಿಂದ ಕಿರುಕುಳವಾಗಿದೆ. ಹೀಗಾಗಿ ಪೊನ್ನಣ್ಣ, ಮಂಥರ್‌ ವಿರುದ್ಧ ಕೇಸ್‌ ದಾಖಲಿಸಬೇಕು. ತನಿಖೆಯನ್ನು ಸಿಬಿಐಗೆ ಕೊಡಬೇಕು.
-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಬಿಜೆಪಿಗೆ ಹತಾಶೆ

ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಬಿಜೆಪಿಯವರು ಹತಾಶರಾಗಿ ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಅದು ಅವರಿಗೆ ಅಭ್ಯಾಸವಾಗಿದೆ.

- ಸಿದ್ದರಾಮಯ್ಯ ಮುಖ್ಯಮಂತ್ರಿ