ಕೊಬ್ಬರಿ ಬೆಳೆಗಾರರ ಹಿತ ಕಾಯುವಲ್ಲಿ ಸರ್ಕಾರ ವಿಫಲ: ಕೋಡಿಹಳ್ಳಿ ಚಂದ್ರಶೇಖರ್
ಕೊಬ್ಬರಿಯ ದರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕೊಬ್ಬರಿ ಬೆಳೆಗಾರರ ಹಿತ ಕಾಯುವಲ್ಲಿ ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 21 ರಿಂದ ಸೆ.16ರವರೆಗೆ ಕೊಬ್ಬರಿ ಬೆಳೆಯುವ ಎಲ್ಲಾ ತಾಲೂಕುಗಳಲ್ಲಿ ಬಂದ್ ನಡೆಸಲಾಗುವುದು ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ತುಮಕೂರು(ಜು.18): ಕೊಬ್ಬರಿಯ ದರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕೊಬ್ಬರಿ ಬೆಳೆಗಾರರ ಹಿತ ಕಾಯುವಲ್ಲಿ ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 21 ರಿಂದ ಸೆ.16ರವರೆಗೆ ಕೊಬ್ಬರಿ ಬೆಳೆಯುವ ಎಲ್ಲಾ ತಾಲೂಕುಗಳಲ್ಲಿ ಬಂದ್ ನಡೆಸಲಾಗುವುದು ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಗಸ್ಟ್ 1ರಂದು ಚಿಕ್ಕನಾಯಕನಹಳ್ಳಿ ತಾಲೂಕು ಕೇಂದ್ರದಲ್ಲಿ ಬಂದ್ ಆಚರಿಸಲಾಗುವುದು. ನಂತರದಲ್ಲಿ ತೆಂಗು ಬೆಳೆಯುವ ಸುಮಾರು 33 ತಾಲೂಕು ಕೇಂದ್ರಗಳಲ್ಲಿಯೂ ಬಂದ್ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಇದಕ್ಕೆ ಸಾರ್ವಜನಿಕರು, ಕೊಬ್ಬರಿ ಮತ್ತು ತೆಂಗು ಬೆಳೆಗಾರರು ಸಹಕಾರ ನೀಡಿ, ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕೆಂದರು.
ಸಾವರ್ಕರ್ ಪಾಠ ಹೊರಕ್ಕೆ, ಕಾಂಗ್ರೆಸ್ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ: ಮುತಾಲಿಕ್
ಒಂದೆಡೆ ಕೊಬ್ಬರಿ ಸೇರಿದಂತೆ ರೈತರು ತಮ್ಮ ಉತ್ಪನ್ನಗಳಿಗೆ ಬೆಲೆ ಇಲ್ಲದೆ ಪರದಾಡುತ್ತಿದ್ದರೇ, ಯುಪಿಎ ಮತ್ತು ಎನ್‌ಡಿಎ ಮಿತ್ರ ಪಕ್ಷಗಳು ಮುಂಬರುವ ಲೋಕಸಭಾ ಚುನಾವಣೆ ಗೆಲ್ಲಲ್ಲು ತಂತ್ರ, ಪ್ರತಿತಂತ್ರ ರೂಪಿಸುತ್ತಿವೆ. ಕೃಷಿ ಉತ್ಪನ್ನಗಳಿಗೆ ನ್ಯಾಯೋಚಿತ ಬೆಲೆ ನೀಡಬೇಕೆಂಬುದು ನಿಮ್ಮ ಅಜೆಂಡಾದದಲ್ಲಿ ಇಲ್ಲವೆ ಎಂದು ಪ್ರಶ್ನಿಸಿದ ಕೋಡಿಹಳ್ಳಿ, ಸರ್ಕಾರ ಆಗಸ್ಟ್ 15ರೊಳಗೆ ಕೊಬ್ಬರಿಗೆ ತೋಟಗಾರಿಕಾ ಇಲಾಖೆ ಶಿಫಾರಸು ಮಾಡಿರುವ 16730 ರು. ಬೆಂಬಲ ಬೆಲೆ ಘೋಷಣೆ ಮಾಡದಿದ್ದರೆ ಆಗಸ್ಟ್ 16ರಿಂದ ವಿಧಾನಸೌಧ ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಕೋಡಿಹಳ್ಳಿ ಚಂದ್ರಶೇಖರ್ ನುಡಿದರು.
ರಾಜ್ಯದ ಸುಮಾರು 10 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಆದರೆ 20 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕುಂಠಿತವಾಗಿದೆ. ಕೂಡಲೇ ಸರ್ಕಾರ ಮಳೆ ಕೊರತೆ ಇರುವ ಜಿಲ್ಲೆಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಿ, ಪರಿಹಾರ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರುವ ಸೇನೆಯ ಉಪಾಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ, ಕೆಂಕೆರೆ ಸತೀಶ್, ಜಿಲ್ಲಾಧ್ಯಕ್ಷ ಆನಂದ ಪಟೇಲ್, ಗೌರವಾಧ್ಯಕ್ಷ ಧನಂಜಯ ಆರಾಧ್ಯ, ವಿವಿಧ ತಾಲೂಕುಗಳ ಅಧ್ಯಕ್ಷರಾದ ಕೊಡ್ಲಹಳ್ಳಿ ಸಿದ್ದರಾಜು, ಅನಿಲ್‌ಕುಮಾರ್, ಮಲ್ಲಿಕಾರ್ಜುನ್, ರಾಜಣ್ಣ, ಸಣ್ಣ ದ್ಯಾಮೇಗೌಡ, ಲೋಕೇಶ್, ರುದ್ರೇಶಗೌಡ, ಸತೀಶ್ ಮತ್ತಿತರರು ಉಪಸ್ಥಿತರಿದ್ದರು.
ಡಬಲ್ ಗೇಮ್ ಆಡಿದವರನ್ನು ಹತ್ತಿರ ಇಟ್ಟುಕೊಳ್ಳಲ್ಲ: ಶಾಸಕ ದೇಶಪಾಂಡೆ
ಸುಮಾರು 40 ವರ್ಷಗಳ ಹಿಂದೆ ಮುಕ್ತ ಮಾರುಕಟ್ಟೆಯಲ್ಲಿ ಕ್ವಿಂಟಲ್ ಕೊಬ್ಬರಿ ಬೆಲೆ 9900 ರು. ಇತ್ತು. ನಲವತ್ತು ವರ್ಷಗಳಲ್ಲಿ ತೆಂಗು ಬೆಳೆಯಲು ಉಪಯೋಗಿಸುವ ಉಪಕರಣಗಳು, ಗೊಬ್ಬರ, ರಸಾಯನಿಕ ವಸ್ತುಗಳ ಬೆಲೆ ಎಷ್ಟುಪ್ರಮಾಣದಲ್ಲಿ ಹೆಚ್ಚಾಗಿದೆ. ಆದರೆ ಕೊಬ್ಬರಿ ಬೆಲೆ ಮಾತ್ರ ದಿನದಿಂದ ದಿನಕ್ಕೆ ಕುಸಿತ ಕಾಣುತ್ತಾ, ಪ್ರಸ್ತುತ 6500-7500 ರು.ಗಳಿಗೆ ನಿಂತಿದೆ. ಇಷ್ಟಾದರೂ ಕೇಂದ್ರ, ರಾಜ್ಯ ಸರ್ಕಾರವಾಗಲಿ ಕೊಬ್ಬರಿಗೆ ಬೆಳೆಗಾರರ ನೆರವಿಗೆ ಬಂದಿಲ್ಲ. ದೇಶದಲ್ಲಿ ಸರ್ಕಾರಗಳು ಜೀವಂತ ಇವೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಸದನದಲ್ಲಿ ಈ ವಿಚಾರ ಚರ್ಚೆಯಾದ ನಂತರ ರಾಜ್ಯ ಸರ್ಕಾರ ಕ್ವಿಂಟಲ್‌ಗೆ 1250 ರು. ಪೋ›ತ್ಸಾಹ ನೀಡಿ ಕೈತೊಳೆದುಕೊಂಡಿದೆ. ಕೃಷಿ ಆವರ್ತ ನಿಧಿಯಿಂದಲಾದರೂ ಹೆಚ್ಚಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಬೇಕು.
-ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯ ಅಧ್ಯಕ್ಷ, ರೈತ ಸಂಘ ಮತ್ತು ಹಸಿರು ಸೇನೆ