ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೂದುಟಗಿ ಗ್ರಾಮದ ಬಳಿ ಕೃಷ್ಣಾ ನದಿಯಿಂದ ಯಲಬುರ್ಗಾ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಒಡೆದ ಪೈಪ್‌ನಿಂದ ನೀರು ಹೊರಬರುತ್ತಿದ್ದು, ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.
ಕೊಪ್ಪಳ (ಸೆ.15): ಫೈಲ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿಯುತ್ತಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೂದುಟಗಿ ಗ್ರಾಮದ ಬಳಿ ನಡೆದಿದೆ.
ಬಳಿ ಕೃಷ್ಣಾ ನದಿಯಿಂದ ಯಲಬುರ್ಗಾ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಪೈಪ್‌ಲೈನ್ ಒಡೆದ ಪರಿಣಾಮ ಈ ಘಟನೆ ನಡೆದಿದೆ. ರವಿವಾರ ರಾತ್ರಿಯಿಂದ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಹರಿದು ಪೋಲಾಗುತ್ತಿದೆ. ಒಡೆದ ಪೈಪುಗಳಿಂದ ದೊಡ್ಡ ಪ್ರಮಾಣದಲ್ಲಿ ನೀರು ಹೊರಬರುತ್ತಿದ್ದು, ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.
ಕೃಷ್ಣಾ ನದಿಯಿಂದ ಕೆರೆ ತುಂಬಿಸುವ ಯೋಜನೆಯ ಈ ಪೈಪ್‌ಲೈನ್ ಒಡೆದಿರುವುದರಿಂದ ಸ್ಥಳೀಯ ರೈತರು ತಮ್ಮ ಜಮೀನು, ಬೆಳೆಗಳು ಮುಳುಗಡೆಯಾಗುವ ಭಯದಿಂದ ಕಂಗಾಲಾಗಿದ್ದಾರೆ. ಈ ಬಗ್ಗೆ ಸ್ಥಳೀಯರು ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತುರ್ತು ಕ್ರಮಕ್ಕಾಗಿ ಕಾಯುತ್ತಿದ್ದಾರೆ.
ಇತ್ತೀಚೆಗೆ ತುಂಗಾಭದ್ರ ಗೇಟ್ ಒಡೆದು ಸುತ್ತಮುತ್ತಲಿನ ರೈತರಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದ ನೀರು ಪಕ್ಕದ ಜಮೀನುಗಳಿಗೆ ನುಗ್ಗುತ್ತಿರುವುದರಿಂದ ಬೆಳೆಹಾನಿಯಾಗುವ ಆತಂಕದಲ್ಲಿ ರೈತರು ತಕ್ಷಣದ ಕ್ರಮಕ್ಕೆ ಎದುರು ನೋಡುತ್ತಿದ್ದಾರೆ.
