ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಪ್ಪಳ ಭೇಟಿಯ ಹಿನ್ನೆಲೆಯಲ್ಲಿ, ದಸರಾ ಹಬ್ಬಕ್ಕಾಗಿ ಹಾಕಲಾಗಿದ್ದ ಕೇಸರಿ ಬಂಟಿಂಗ್ಸ್‌ಗಳನ್ನು ತೆಗೆಯಲು ಪೊಲೀಸರು ಮುಂದಾಗಿದ್ದಾರೆ. ಈ ಕ್ರಮಕ್ಕೆ ಹಿಂದೂ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಪ್ಪಳ (ಅ.4): ನಾಳೆ ನಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಪ್ಪಳಕ್ಕೆ ಆಗಮಿಸಲಿರುವ ಹಿನ್ನೆಲೆ ಪಟ್ಟಣದಲ್ಲಿ ಹಾಕಿರುವ ಎಲ್ಲ ಕೇಸರಿ ಬಂಟಿಂಗ್ಸ್ ತೆಗೆಯಲು ಮುಂದಾಗಿರೋ ಪೊಲೀಸರ ನಿರ್ಧಾರದ ವಿರುದ್ಧ ಹಿಂದೂ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಳೆ ನಾಡಿದ್ದು ಭಾಗ್ಯನಗರ ಪಟ್ಟಣಕ್ಕೆ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗಮಿಸಲಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಎಸ್‌ಎಸ್‌ಕೆ ಸಮಾಜದವರು ಅಂಬಾಭವಾನಿ ದೇವಾಲಯದ ಮುಂದೆ ಕಟ್ಟಿರುವ ಕೇಸರಿ ಬಂಟಿಗ್ಸ್‌ಗಳನ್ನು ತೆರವುಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಇದಕ್ಕೆ ಸ್ಥಳೀಯ ಹಿಂದೂ ಸಮಾಜದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಚು. ಆಯೋಗದಿಂದ 6 ರಾಜಕೀಯ ಪಕ್ಷಗಳಿಗೆ ಶಾಕ್: ಅಂಬೇಡ್ಕರ್ ಪೀಪಲ್ಸ್ ಪಾರ್ಟಿ, ವಾಟಾಳ್ ಪಾರ್ಟಿ ಸೇರಿ ನೋಂದಾಯಿತ ಮಾನ್ಯತೆ ಪಡೆಯದ್ದಕ್ಕೆ ಶೋಕಾಸ್ ನೋಟೀಸ್

ಸಿಎಂ ಸಿದ್ದರಾಮಯ್ಯ ಅವರು ದೇವಾಲಯದ ಮುಂದೆ ಹಾದು ಹೋಗಲಿರುವ ಕಾರಣ, ಪೊಲೀಸರು ಕೇಸರಿ ಬಂಟಿಗ್ಸ್ ತೆಗೆಯುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರ ಈ ಕ್ರಮಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು, 'ಜೈ ಶ್ರೀರಾಮ್' ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಿದರು. ಪರಿಸ್ಥಿತಿಯನ್ನು ಗಮನಿಸಲು ಎಂಎಲ್‌ಸಿ ಹೇಮಲತಾ ನಾಯಕ್ ಮತ್ತು ಬಿಜೆಪಿ ಮುಖಂಡ ಡಾ. ಬಸವರಾಜ ಕ್ಯಾವಟರ್ ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸ್ ಕ್ರಮಕ್ಕೆ ವಿರೋಧವಾಗಿ ಜನರ ಆಕ್ರೋಶ ಹೆಚ್ಚಾಗುತ್ತಿದ್ದು, ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ.