ಬೆಂಗಳೂರು (ಏ.10):   ಮುಜುರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕೊರೋನಾ ಸೋಂಕು ತಗುಲಿದೆ. 

ಈ ಬಗ್ಗೆ ಸಚಿವ ಪೂಜಾರಿ  ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ ತಮ್ಮ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕಾ ಕ್ರಮವಾಗಿ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. 

 

ಸದ್ಯ ಸಚಿವ ಪೂಜಾರಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು , ಅನಿವಾರ್ಯವಿದ್ದಲ್ಲಿ ದೂರವಾಣಿ ಮೂಲಕ ಸಂಪರ್ಕಿಸಲು ಮನವಿ ಮಾಡಿದ್ದಾರೆ. 

ಒಂದೆರಡು ದಿನಗಳಲ್ಲಿ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳಿ ಎಂದಿದ್ದಾರೆ.