Koti Kanta Gayana: ಅ.28ಕ್ಕೆ ಕೋಟಿ ಕಂಠದಲ್ಲಿ ಕನ್ನಡ ಗೀತೆ ಗಾಯನ: ಸಚಿವ ಸುನಿಲ್‌ ಕುಮಾರ್‌

ರಾಜ್ಯದ ಸಾಂಸ್ಕೃತಿಕ ಇತಿಹಾಸದಲ್ಲೇ ವಿನೂತನವಾದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ ಅ.28ರಂದು ನಾಡಿನಾದ್ಯಂತ ನಡೆಯಲಿದ್ದು, ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಏಕಕಾಲದಲ್ಲಿ ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

koti kanta gayana programme arranged on october 28th says minister v sunil kumar gvd

ಬೆಂಗಳೂರು (ಅ.07): ರಾಜ್ಯದ ಸಾಂಸ್ಕೃತಿಕ ಇತಿಹಾಸದಲ್ಲೇ ವಿನೂತನವಾದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ ಅ.28ರಂದು ನಾಡಿನಾದ್ಯಂತ ನಡೆಯಲಿದ್ದು, ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಏಕಕಾಲದಲ್ಲಿ ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ ಕುಮಾರ್‌ ತಿಳಿಸಿದ್ದಾರೆ. ಕಳೆದ ವರ್ಷ ‘ಮಾತಾಡ್‌ ಮಾತಾಡ್‌ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ‘ಲಕ್ಷಕಂಠ ಗಾಯನ’ಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಅಭಿಯಾನವನ್ನು ಮತ್ತೆ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅ.28ರಂದು ಬೆಳಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ‘ಜಯ ಭಾರತ ಜನನಿಯ ತನುಜಾತೆ’, ಡಾ.ಚನ್ನವೀರ ಕಣವಿ ಅವರ ‘ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ’, ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವಾ’, ಡಾ.ಡಿ.ಎಸ್‌.ಕರ್ಕಿಯವರ ‘ಹಚ್ಚೇವು ಕನ್ನಡದ ದೀಪ’ ಹಾಗೂ ಡಾ. ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಐದು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ. ಈ ಹಾಡುಗಳೊಂದಿಗೆ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುತಪಡಿಸಬಹುದಾಗಿದೆ ಎಂದು ಹೇಳಿದ್ದಾರೆ.

ಗ್ರಾಹಕ ಸ್ನೇಹಿಯಾಗಿ ಇಂಧನ ಇಲಾಖೆ: ಸಚಿವ ಸುನೀಲ್‌ ಕುಮಾರ್‌

ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ವಿಶ್ವವಿದ್ಯಾಲಯಗಳು, ತಾಲೂಕು ಕೇಂದ್ರಗಳು, ದೆಹಲಿ ಕನ್ನಡ ಸಂಘ, ಹೊರನಾಡು, ಗಡಿನಾಡ ಸಂಘಗಳ ಕಚೇರಿ, ವಿಧಾನಸೌಧದ ಮೆಟ್ಟಿಲು ಹಾಗೂ ವಿಧಾನಸೌಧ-ವಿಕಾಸಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು, ಜನಪ್ರತಿನಿಧಿಗಳು, ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಸಮೂಹ ಗಾಯನ ನಡೆಸುವರು. ಕನ್ನಡಿಗರು, ಅನಿವಾಸಿ ಕನ್ನಡಿಗರು, ಹೊರನಾಡ ಕನ್ನಡಿಗರು ಹಾಗೂ ಗಡಿನಾಡ ಕನ್ನಡಿಗರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದು, ಪ್ರಪಂಚದಾದ್ಯಂತ ಕನ್ನಡದ ಕಂಪನ್ನು ಪಸರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಸಮುದಾಯಕ್ಕೆ ಉಚಿತ ವಿದ್ಯುತ್‌ ರದ್ದುಗೊಳಿಸಿಲ್ಲ: ಸಚಿವ ಸುನೀಲ್‌

ಅದೇ ರೀತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಸಿಟಿ ರೈಲು ನಿಲ್ದಾಣ, ಮೆಟ್ರೋ ನಿಲ್ದಾಣದಲ್ಲೂ ಈ ಐದು ಕನ್ನಡ ಗೀತೆಗಳನ್ನು ಹಾಡುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಡಿನ ಪ್ರಮುಖ ಪ್ರವಾಸಿ ಸ್ಥಳಗಳು, ಕೋಟೆಗಳು, ಕಡಲತೀರ, ಐಟಿ ಕಂಪನಿಗಳು, ಆಸ್ಪತ್ರೆ ಹಾಗೂ ಜಿಲ್ಲಾ ಕೇಂದ್ರಗಳಲ್ಲೂ ಕೋಟಿ ಕಂಠ ಗಾಯನ ಅಭಿಯಾನ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡದ ಪ್ರಮುಖ ಸಾಧಕರು, ಮಠಾಧೀಶರು, ಸಾಹಿತಿಗಳು, ಕವಿಗಳು, ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಲಿದ್ದು, ಕನ್ನಡದ ಅಸ್ಮಿತೆಯ ಅನಾವರಣಗೊಳಿಸುವ ಕಾರ್ಯದಲ್ಲಿ ಭಾಗವಹಿಸಬೇಕೆಂದು ಸಚಿವರು ಪತ್ರಿಕಾ ಹೇಳಿಕೆಯಲ್ಲಿ ಕೋರಿದ್ದಾರೆ.

Latest Videos
Follow Us:
Download App:
  • android
  • ios