ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಳ್ಳಂಬೆಳಗ್ಗೆ ಭೇಟಿಯಾಗಿದ್ದಾರೆ. ಇಷ್ಟೊಂದು ಬೆಳಗ್ಗೆ ಈ ರಾಜಕೀಯ ಮುಖಂಡರು ಭೇಟಿ ಮಾಡಿದ್ದೇಕೆ..? ಕಾರಣವೇನು..?

ಪ್ರತಿನಿತ್ಯ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರೋ ದಿನಗಳಲ್ಲಿ ಡಿಕೆಶಿ ಅವರ ದಿಢೀರ್ ಭೇಟಿ ನಿಜಕ್ಕೂ ಕುತೂಹಲ ಮೂಡಿಸಿದೆ. ಈ ಹಠಾತ್ ಭೇಟಿಯ ಕಾರಣವೇನು ಎಂದ ಕುತೂಹಲ ಎಲ್ಲರಲ್ಲೂ ಇದೆ.

DKS ಪುತ್ರಿ ನಿಶ್ಚಿತಾರ್ಥಕ್ಕೆ ಯಾರಿಗೂ ಆಹ್ವಾನ ಇರಲಿಲ್ಲ : SMK ಆಹ್ವಾನದ ಮೇರೆಗೆ ಆಗಮಿಸಿದ್ದ ಬಿಜೆಪಿಗರು

ಮಗಳ ಮದುವೆಗೆ ಸಿಎಂ ಬಿಎಸ್.ಯಡಿಯೂರಪ್ಪ ಅವರಿಗೆ ಡಿಕೆಶಿ ಆಹ್ವಾನ ನೀಡಿದ್ದಾರೆ. ಪ್ರೇಮಿಗಳ ದಿನವಾದ ಫೆ.14, 15 ರಂದು ಡಿಕೆಶಿ ಪುತ್ರಿ ಐಶ್ವರ್ಯಾ ವಿವಾಹ ಅದ್ಧೂರಿಯಾಗಿ ನಡೆಯಲಿದೆ.

ಮಗಳ ಮದುವೆಗೆ ಆಮಂತ್ರಣ ಪತ್ರಿಕೆ ಹಂಚುತ್ತಿರುವ ಡಿಕೆಶಿ ಸಿಎಂ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ಥ್ಯ ಹೆಗ್ಡೆ ಅವರ ವಿವಾಹ ನಿಶ್ಚಿತಾರ್ಥ ನವೆಂಬರ್‌ನಲ್ಲಿ ಅದ್ದೂರಿಯಾಗಿ ನಡೆದಿತ್ತು