ಕೋವಿಡ್‌ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ: ಕೋರ್ಟ್‌ಗೆ ಡಿಕೆಶಿ ಹಾಜರು

*  ಕೋವಿಡ್‌ ನಿಯಮ ಉಲ್ಲಂಘನೆ ಪ್ರಕರಣ
*  ಹೇಳಿಕೆ ದಾಖಲಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ
*  ಮುಂದಿನ ವಿಚಾರಣೆಯನ್ನು ಜೂ.2ಕ್ಕೆ ಮುಂದೂಡಿದ ನ್ಯಾಯಾಲಯ 
 

KPCC President DK Shivakumar Attended The Court on Mekedatu Padayatra Case grg

ಬೆಂಗಳೂರು(ಏ.23):  ಮೇಕೆದಾಟು ಯೋಜನೆ(Mekedatu Project) ಜಾರಿಗೆ ಒತ್ತಾಯಿಸಿ ನಡೆಸಿದ ಪಾದಯಾತ್ರೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದರು. ಖುದ್ದು ಹಾಜರಾಗುವಂತೆ ನ್ಯಾಯಾಲಯ(Court) ಸಮನ್ಸ್‌ ಜಾರಿ ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ನ್ಯಾಯಾಲಯಕ್ಕೆ(Court) ಹಾಜರಾಗಿದ್ದರು. ಈ ವೇಳೆ ಶಿವಕುಮಾರ್‌ ಹೇಳಿಕೆಯನ್ನು ನ್ಯಾಯಾಲಯವು ದಾಖಲಿಸಿದೆ. ಮುಂದಿನ ವಿಚಾರಣೆಯನ್ನು ಜೂ.2ಕ್ಕೆ ನ್ಯಾಯಾಲಯಕ್ಕೆ ಮುಂದೂಡಿಕೆ ಮಾಡಿದೆ.

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್‌(Congress) ಪಾದಯಾತ್ರೆ(Padayatra) ಹಮ್ಮಿಕೊಂಡಿತ್ತು. ಕೋವಿಡ್‌ ಹೆಚ್ಚಳವಾಗಿದ್ದ ವೇಳೆ ಪಾದಯಾತ್ರೆ ಕೈಗೊಂಡಿದ್ದರಿಂದ ಕೋವಿಡ್‌ ನಿಯಮ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯವು ಖುದ್ದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು. ರೈತರ ಜತೆ ರಾಜಭವನ ಚಲೋ ಘಟನೆಯಲ್ಲಿಯೂ ಶಿವಕುಮಾರ್‌ ಅವರಿಗೆ ನ್ಯಾಯಾಲಯ ನೊಟೀಸ್‌ ನೀಡಿತ್ತು. ಈ ಹಿನ್ನೆಲೆಯಲ್ಲಿಯೂ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು.

ಸರ್ಕಾರ ರಚಿಸಲು ಕಾಂಗ್ರೆಸ್‌ ತಯಾರಿ, ಡಿಕೆ ಶಿವಕುಮಾರ್‌ಗೆ ಎಐಸಿಸಿ ಹೊಸ ಜವಾಬ್ದಾರಿ

ಜನಪರ ಹೋರಾಟ ಹತ್ತಿಕ್ಕುವ ಯತ್ನ:

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್‌, ಬಿಜೆಪಿ ಸರ್ಕಾರವು ನಮ್ಮ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಜನ ಪರ ಹೋರಾಟವನ್ನು ಹತ್ತಿಕ್ಕಲು ಪ್ರಕರಣಗಳನ್ನು ದಾಖಲಿಸಿ ನ್ಯಾಯಾಲಯಗಳಿಗೆ ಅಲೆಯುವಂತೆ ಮಾಡಿದ್ದಾರೆ ಎಂದರು.

ಕೋರ್ಟ್ ಮಹತ್ವದ ತೀರ್ಪು, ಡಿಕೆ ಶಿವಕುಮಾರ್‌ಗೆ ನಿಂದಿಸಿದ್ದ ವ್ಯಕ್ತಿಗೆ ಜೈಲು ಶಿಕ್ಷೆ

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿಗೆ ಜೈಲು ಶಿಕ್ಷೆಯಾಗಿತ್ತು. ಡಿಕೆ ಶಿವಕುಮಾರ್​​ಗೆ ನಿಂದಿಸಿದ್ದ  ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ (Sullia Court) ಜಡ್ಜ್​ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದರು.

ನಾಲ್ಕು ಅಪರಾಧಗಳಲ್ಲಿಯೂ  2 ವರ್ಷ ಜೈಲು ಶಿಕ್ಷೆಯಾಗಿದ್ದು. ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿತ್ತು.

ಏನಿದು ಪ್ರಕರಣ?:

2016ರಲ್ಲಿ ಡಿಕೆ ಶಿವಕುಮಾರ್ ಇಂಧನ ಸಚಿವರಾಗಿದ್ದ ವೇಳೆ ನಡೆದಿದ್ದ ಪ್ರಕರಣ ಇದಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಎಂಬಾತ 2016ರ ಫೆಬ್ರವರಿ 28ರಂದು ಅಂದಿನ ಇಂಧನ ಸಚಿವ ಡಿಕೆ ಶಿವಕುಮಾರ್​​ಗೆ ಕರೆ ಮಾಡಿದ್ದರು. ವಿದ್ಯುತ್ ಸಮಸ್ಯೆ ಹೇಳಿಕೊಳ್ಳಲು ಕರೆ ಮಾಡಿದ್ದ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.

Mekedatu Project: ಒನ್ ಮ್ಯಾನ್ ಶೋ ಆಯ್ತಾ ಪಾದಯಾತ್ರೆ: ಡಿಕೆಶಿಗೆ ಸಾಥ್‌ ಕೊಡೋರೇ ಇಲ್ಲ..!

ಈ ಹಿನ್ನೆಲೆಯಲ್ಲಿ ಅಂದಿನ ಮೆಸ್ಕಾಂ ಎಂಡಿ ಮೂಲಕ ಗಿರಿಧರ್ ವಿರುದ್ದ ಡಿಕೆ ಶಿವಕುಮಾರ್ ಪೊಲೀಸ್ ದೂರು ದಾಖಲಿಸಿದ್ದರು. ಕೇಸು ದಾಖಲಿಸಿಕೊಂಡಡಿದ್ದ ಪೊಲೀಸರು ರಾತ್ರೋರಾತ್ರಿ ಗಿರಿಧರ್ ರೈನನ್ನು ಬಂಧಿಸಿದ್ದರು. ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಮಾನ ಹಾನಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ನಾಲ್ಕು ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆಗೆ ಸುಳ್ಯ ಕೋರ್ಟ್‌ ಸಾಕ್ಷಿ ಹೇಳಲು ಡಿಕೆ ಶಿವಕುಮಾರ್‌ ಅವರಿಗೆ ಮೂರು ಬಾರಿ ಸಮಸ್ಸ್‌, ಒಂದು ಬಾರಿ ವಾರೆಂಟ್‌ ಜಾರಿ ಮಾಡಿತ್ತು. ಈ ಹಿನ್ನೆಲೆಲ್ಲಿ ಡಿಕೆ ಶಿವಕುಮಾರ್ ಅವರು 2021ರ ಸೆ.29ರಂದು ಸುಳ್ಯ ಕೋರ್ಟ್‌ಗೆ ಹಾಜರಾಗಿದ್ದರು.
 

Latest Videos
Follow Us:
Download App:
  • android
  • ios