ಬೆಂಗಳೂರು (ಮಾ.03):  ಪಕ್ಷದ ಯಾವುದೇ ಮುಖಂಡರಾಗಲಿ ನಾಯಕರ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವುದನ್ನು ಸಹಿಸುವುದಿಲ್ಲ. ಒಂದು ವೇಳೆ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಕೈಗೊಳ್ಳುತ್ತೇನೆ ಎಂದು ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. 

ಡಿ.ಕೆ.ಶಿವಕುಮಾರ್‌ ತಮ್ಮನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂಬ ಅಖಂಡ ಶ್ರೀನಿವಾಸ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಖಂಡ ಶ್ರೀನಿವಾಸ್‌ ಮೂರ್ತಿ ಆಗಿರಬಹುದು ಅಥವಾ ಯಾರೇ ಆಗಿರಬಹುದು. ನಾಯಕರ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದು. ಒಂದು ವೇಳೆ ನೀಡಿದರೆ ಖಂಡಿಸುತ್ತೇನೆ, ಜೊತೆಗೆ ಶಿಸ್ತು ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.

2023ರ ವಿಧಾನಸಭಾ ಚುನಾವಣೆಗೆ ಈಗಲೇ ಕಾಂಗ್ರೆಸ್‌ನಲ್ಲಿ ಶುರುವಾಯ್ತು ಟಿಕೆಟ್‌ ಫೈಟ್ ...

ಸಿದ್ದರಾಮಯ್ಯಗೆ ಮುನಿಸಿಲ್ಲ:  ಸಿದ್ದರಾಮಯ್ಯ ಕಾಂಗ್ರೆಸ್‌ ಪ್ರತಿಭಟನೆಗೆ ಆಗಮಿಸದ ಬಗ್ಗೆ ಮಾತನಾಡಿದ ಅವರು, ಉಪ ಚುನಾವಣೆ ಹಾಗೂ ಬಜೆಟ್‌ ಅಧಿವೇಶನ ಬರುತ್ತಿದೆ. ಹೀಗಾಗಿ ಶಾಸಕಾಂಗ ಪಕ್ಷದ ನಾಯಕರಿಗೆ ಕೆಲಸ ಇರುತ್ತದೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಎಲ್ಲಾ ಕಡೆಯೂ ಹೋಗಲು ಸಾಧ್ಯವಿಲ್ಲ. ನಾನೂ ಸಹ ಕೆಲವೆಡೆ ಹೋಗಲು ಸಾಧ್ಯವಾಗಲಿಲ್ಲ. ಹಾಗಂತ ಮುನಿಸು ಎಂದು ಹೇಳಲು ಸಾಧ್ಯವೇ? ಸಿದ್ದರಾಮಯ್ಯ ಬಂದಿಲ್ಲ ಎಂಬ ಕಾರಣಕ್ಕೆ ಬೇರೆ ವಿಚಾರ ಕಲ್ಪಿಸುವುದು ಬೇಡ ಎಂದರು.

- ನಾಯಕರ ಬಗ್ಗೆ ಬಹಿರಂಗ ಹೇಳಿಕೆ ಸಹಿಸಲ್ಲ