ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ​ ಸತೀಶ್ ಜಾರಕಿಹೊಳಿ ಅವರ ಗನ್‌ಮ್ಯಾನ್ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ಬೆಂಗಳೂರು, (ಏ.18): ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಅವರ ಗನ್‌ಮ್ಯಾನ್‌ ಇಂದು (ಬುಧವಾರ) ಕೋವಿಡ್‌ಗೆ ಬಲಿಯಾಗಿದ್ದಾರೆ.

10 ವರ್ಷದಿಂದ ಬೆಂಗಳೂರಲ್ಲಿ ಸತೀಶ್ ಜಾರಕಿಹೊಳಿ‌ ಗನ್‌ಮ್ಯಾನ್ ಆಗಿದ್ದರು. ಆದ್ರೆ, ಅವರಿಗೆ ಇತ್ತೀಚೆಗೆ ಕೊರೋನಾ ಸೋಂಕು ತಗುಲಿತ್ತು. ಇದರಿಂದ ಆಸ್ಪತ್ರೆಗೆ ದಾಖಲಾಗಿದ್ದರು.

"

ಮೂಗಿನಲ್ಲಿ ನಿಂಬೆ ಹಣ್ಣಿನ ರಸ ಹಾಕಿಕೊಂಡ ಶಿಕ್ಷಕ ಸಾವು! 

ಆದ್ರೆ, ಬುಧವಾರ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಮೇಶ್‌ ಕಳೆದ 10 ವರ್ಷಗಳಿಂದ ಬೆಂಗಳೂರಲ್ಲಿ ಸತೀಶ್ ಜಾರಕಿಹೊಳಿ‌ ಗನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. 

ಸತೀಶ್ ಜಾರಕಿಹೊಳಿ ಅವರ ಸಹೋದರ ರಮೇಶ್ ಜಾರಕಿಹೊಳಿ ಅವರಿಗೂ ಕೊರೋನಾ ಸೋಂಕು ತಗುಲಿತ್ತು. ಅಲ್ಲದೇ ಬಹಳಷ್ಟು ರಾಜಕಾರಣಿಗಳು ಆಪ್ತರು ಸಹ ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

"