ತಮ್ಮ ಪುತ್ರಿಯರಿಗೆ ಸರ್ಕಾರಿ ಉದ್ಯೋಗ ಕೊಡಿಸಲು ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿ, ಅಧಿಕಾರ ದುರುಪಯೋಗ, ಪಕ್ಷಪಾತ, ಅಕ್ರಮ ಎಸಗಿದ ಆರೋಪ ಹೊತ್ತಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರನ್ನು ಕೊನೆಗೂ ಅಮಾನತು ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು (ಜು.13): ತಮ್ಮ ಪುತ್ರಿಯರಿಗೆ ಸರ್ಕಾರಿ ಉದ್ಯೋಗ ಕೊಡಿಸಲು ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿ, ಅಧಿಕಾರ ದುರುಪಯೋಗ, ಪಕ್ಷಪಾತ, ಅಕ್ರಮ ಎಸಗಿದ ಆರೋಪ ಹೊತ್ತಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರನ್ನು ಕೊನೆಗೂ ಅಮಾನತು ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಸಂವಿಧಾನದ ವಿಧಿ 317(1)ರ ಅಡಿಯಲ್ಲಿ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವಂತೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ. ಮುಂದಿನ ಆದೇಶದವರೆಗೆ KPSC ಹಿರಿಯ ಸದಸ್ಯರೊಬ್ಬರನ್ನ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಶಿವಶಂಕರಪ್ಪ ಎಸ್ ಸಾಹುಕಾರ್ ಮೇಲಿದ್ದ ಆರೋಪಗಳೇನು>
- ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು 'ಕೈಗಾರಿಕಾ ವಿಸ್ತರಣಾ ಅಧಿಕಾರಿ' ಹುದ್ದೆಗಳಿಗೆ ಕಾನೂನುಬಾಹಿರವಾಗಿ ಆಯ್ಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ.
- ನೇರ ಅವಲಂಬಿತರೇ KPSC ಆಯ್ಕೆ ಪ್ರಕ್ರಿಯೆಯಲ್ಲಿದ್ದರೂ, ಅಧ್ಯಕ್ಷರು ಈ ಪ್ರಕ್ರಿಯೆಯಿಂದ ದೂರವಿರದೆ ನಿಯಮ ಉಲ್ಲಂಘಿಸಿದ್ದಾರೆ.
- ಸುಳ್ಳು ಆದಾಯ ಪ್ರಮಾಣಪತ್ರದ ಆರೋಪ ನಿಯಮಿತ ಮಿತಿಗಿಂತ ಹೆಚ್ಚಿನ ಆದಾಯವಿದ್ದರೂ, ಸಾಹುಕಾರ್ ಅವರ ಪುತ್ರಿಯೊಬ್ಬರು ತಮ್ಮ ಕುಟುಂಬದ ವಾರ್ಷಿಕ ಆದಾಯ ಕೇವಲ 40,000 ರೂ. ಎಂದು ಸುಳ್ಳು ಘೋಷಣೆ ನೀಡಿ ಆದಾಯ ಮತ್ತು ಜಾತಿ ಪ್ರಮಾಣಪತ್ರ ಪಡೆದಿದ್ದಾರೆ.
- ತಂದೆ KPSC ಅಧ್ಯಕ್ಷರಾಗಿದ್ದಾರೆ ಎಂಬ ಸತ್ಯವನ್ನು ಮರೆಮಾಚಿ, ಸುಳ್ಳು ದಾಖಲೆಗಳ ಮೂಲಕ ಹಿಂದುಳಿದ ವರ್ಗಗಳ (OBC) ಮೀಸಲಾತಿ ಮತ್ತು 'ಕ್ರೀಮಿ ಲೇಯರ್' ವಿನಾಯಿತಿಯನ್ನು ಕಾನೂನುಬಾಹಿರವಾಗಿ ಪಡೆದುಕೊಂಡಿದ್ದಾರೆ.
- 30-03-2002ರ ಸರ್ಕಾರಿ ಆದೇಶದ (SWD 225 BCA 2000) ಪ್ರಕಾರ KPSC ಅಧ್ಯಕ್ಷರ ಮಕ್ಕಳು ಹಿಂದುಳಿದ ವರ್ಗಗಳ ಕೋಟಾದಡಿ ಮೀಸಲಾತಿ ಪಡೆಯಲು ಅರ್ಹರಲ್ಲದಿದ್ದರೂ, ಉದ್ದೇಶಪೂರ್ವಕವಾಗಿ ಮಾಹಿತಿಯನ್ನು ಮರೆಮಾಚಿ ಲಾಭ ಪಡೆದಿದ್ದಾರೆ.
- ಅಧ್ಯಕ್ಷರು ಸಲ್ಲಿಸಿದ ಆದಾಯ, ಆಸ್ತಿ ವಿವರ ಹಾಗೂ ಇತರ ದಾಖಲೆಗಳು ಅವರ "ದುರ್ನಡತೆ"ಯನ್ನು (Misbehaviour) ಸ್ಪಷ್ಟಪಡಿಸುತ್ತವೆ.
- ಹೀಗಾಗಿ ಆಯೋಗದ ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ರಾಜ್ಯಪಾಲರು ಕಠಿಣ ಕ್ರಮ ಕೈಗೊಂಡಿದ್ದಾರೆ.
ಕೆಪಿಎಸ್‌ಸಿ ಹಂಗಾಮಿ ಅಧ್ಯಕ್ಷ ಯಾರು?
ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಎಸ್ ಸಾಹುಕಾರ ಅಮಾನತುಗೊಳಿಸಿದ ರಾಜ್ಯಪಾಲರು ಆದೇಶ ಹೊರಡಿಸಿದ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸದಸ್ಯ ಹಿರಿಯ ಸದಸ್ಯ ಬಿ. ಪ್ರಭುದೇವ ಅವರನ್ನು ಅಧ್ಯಕ್ಷರಾಗಿ ನೇಮಿಸಿ ಅಧಿಸೂಚನೆ ಹೊರಡಿಸಿದ್ದಾರೆ.
…


