Asianet Suvarna News Asianet Suvarna News

ಕೆಪಿಎಸ್ಸಿ ಪರೀಕ್ಷೆ ಎಡವಟ್ಟು:ಅಭ್ಯರ್ಥಿಗಳ ತಪಾಸಣೆಗೆ ಮಕ್ಕಳ ಬಳಕೆ!

ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ವೃಂದದ ಕಿರಿಯ ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದು, ಈ ವೇಳೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ತಪಾಸಣೆಗೆ ಮಕ್ಕಳನ್ನು ಬಳಕೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

KPSC Exam  Use of Children to Check Candidates viral news at Mangaluru rav
Author
First Published Dec 18, 2023, 12:54 PM IST

ಮಂಗಳೂರು (ಡಿ.18): ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ವೃಂದದ ಕಿರಿಯ ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದು, ಈ ವೇಳೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ತಪಾಸಣೆಗೆ ಮಕ್ಕಳನ್ನು ಬಳಕೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಮಂಗಳೂರಿನ ಬಲ್ಮಠದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಭಾನುವಾರ ಪರೀಕ್ಷೆ ನಡೆಯಿತು. ಸಣ್ಣ ಸಣ್ಣ ಮಕ್ಕಳು ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ತಪಾಸಣೆ ಮಾಡುವ ಕಾರ್ಯ ಮಾಡಿದ್ದು ಕಂಡು ಬಂದಿತ್ತು.

ಕೆಇಎ ಪರೀಕ್ಷೆ ಅಕ್ರಮ: ಪೊಲೀಸ್ ಠಾಣೆಯಲ್ಲಿ ಆರ್‌ಡಿ ಪಾಟೀಲ್‌ ಸ್ಥಿತಿ ಕಂಡು ಪತ್ನಿ ಕಣ್ಣೀರು!

ಸರ್ಕಾರಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನ ತಪಾಸಣೆಗೆ ಬಳಸಿಕೊಂಡು ಅಧಿಕಾರಿಗಳು ಬೇಜವಾಬ್ದಾರಿ ತೋರಿರುವುದು ಕಂಡು ಬಂದಿದೆ.

ಪರೀಕ್ಷಾ ಅಕ್ರಮವನ್ನು ತಡೆಯುವ ದೃಷ್ಟಿಯಿಂದ ಮೊಬೈಲ್ ಜಾಮರ್, ಮೆಟಲ್ ಡಿಟೆಕ್ಟರ್, ಬಯೋ ಮೆಟ್ರಿಕ್ ಫೇಸ್ ಡಿಟೆಕ್ಷನ್ ಹಾಗೂ ಬಾಡಿ ಕ್ಯಾಮೆರಾ ಬಳಕೆಗೆ ಕೆಪಿಎಸ್‌ಸಿ ಸೂಚಿಸಿದೆ. ಆದರೆ, ಅಧಿಕಾರಿಗಳು ವಿದ್ಯಾರ್ಥಿಗಳನ್ನು ಬಳಸಿಕೊಂಡು ಕಾಟಾಚಾರದ ತಪಾಸಣೆಯನ್ನು ನಡೆಸಿದ್ದಾರೆ.

ವಿದ್ಯಾರ್ಥಿಗಳು ಮೆಟಲ್ ಡಿಟೆಕ್ಟರ್ ಹಿಡಿದು ಪರೀಕ್ಷಾರ್ಥಿಗಳ ತಪಾಸಣೆ ಮಾಡಿದ್ದಾರೆ. ಮೆಟಲ್ ಡಿಟೆಕ್ಟರ್ ಹಿಡಿದು ನಿಂತ ವಿದ್ಯಾರ್ಥಿಗಳು ಬೇಕಾಬಿಟ್ಟಿಯಾಗಿ ಪರೀಕ್ಷಾರ್ಥಿಗಳನ್ನು ತಪಾಸಣೆ ಮಾಡಿರುವುದು ಕಂಡು ಬಂದಿದೆ.

ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ಏಳೆಂಟು ವಿದ್ಯಾರ್ಥಿಗಳಿಂದ ಅಭ್ಯರ್ಥಿಗಳ ತಪಾಸಣೆ ಮಾಡಲಾದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಭದ್ರತೆ ಬಗ್ಗೆ ಅರಿವೇ ಇಲ್ಲದ ಮಕ್ಕಳನ್ನು ಪರೀಕ್ಷಾ ಕೇಂದ್ರದ ಭದ್ರತೆಗೆ ನೇಮಕ ಮಾಡಲಾಗಿದ್ದು, ಈ ಮೂಲಕ ಕೆಪಿಎಸ್ಸಿ ಪರೀಕ್ಷಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ.

ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಮಾತನಾಡಿ, ಪರೀಕ್ಷೆ ನಡೆಸಲು ಕೆಪಿಎಸ್‌ಸಿ ಸಂಸ್ಥೆಗೆ ಗುತ್ತಿಗೆ ನೀಡಿದೆ."ಸ್ಕ್ರೀನಿಂಗ್ ಪ್ರಕ್ರಿಯೆಯಲ್ಲಿ ತೊಡಗಿರುವವರು ನಮ್ಮ ಕಾಲೇಜಿನವರಲ್ಲ, ಗುತ್ತಿಗೆ ಪಡೆದ ಏಜೆನ್ಸಿಯಿಂದ ಬಂದವರಾಗಿದ್ದಾರೆಂದು ಹೇಳಿದ್ದಾರೆ.

KPTCL Recruitment Scam: ಅರ್ಧ ಶತಕ ಪೂರೈಸಿದ ಬಂಧಿತರ ಸಂಖ್ಯೆ!

ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರತಿಕ್ರಿಯೆ ನೀಡಿ, ಅಸಿಸ್ಟೆಂಟ್ ಅಕೌಂಟೆಂಟ್ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಿಗೆ ಹತ್ತನೇ ತರಗತಿ ಮಕ್ಕಳಿಂದ ತಪಾಸಣೆ ನಡೆಸುತ್ತಿರುವ ಕೆ.ಪಿ.ಎಸ್.ಸಿ ಇಲಾಖೆಯು ಪರೀಕ್ಷೆಗಳನ್ನು ನಡೆಸಲು ಹೇಗೆ ಸನ್ನದ್ಧರಾಗಿದ್ದಾರೆ ಎಂದು ತಿಳಿಯುತ್ತದೆ.  ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ ವೃತ್ತಿಪರತೆಯ ಕೊರತೆ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.

Follow Us:
Download App:
  • android
  • ios