Asianet Suvarna News Asianet Suvarna News

ಕೆಆರ್‌ಎಸ್‌ ಜಲಾಶಯದಲ್ಲಿ 101.56 ಅಡಿ ನೀರು ಸಂಗ್ರಹ; ಜು.8ರಿಂದ ಮಂಡ್ಯ ವಿಸಿ ನಾಲೆಗೆ ನೀರು ಹರಿವು

ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಸಂಗ್ರಹ ಪ್ರಮಾಣ 101 ಅಡಿ ತಲುಪಿದ್ದು, ಜು.8 ರಿಂದ ಮಂಡ್ಯದ ವಿಶ್ವೇಶ್ವರಯ್ಯ ನಾಲೆಗೆ ನೀರು ಹರಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

KRS reservoir Water level 101 56 feet outflow to vishweshwaraiah channel from June 8 sat
Author
First Published Jul 6, 2024, 8:47 PM IST

ಬೆಂಗಳೂರು (ಜು.06): ಕೆ.ಆರ್.ಎಸ್. ಜಲಾಶಯದಲ್ಲಿ ಶನಿವಾರ ಸಂಜೆ 8 ಗಂಟೆ ವೇಳೆಗೆ ಬರೋಬ್ಬರಿ 101.56 ಅಡಿ ನೀರು ಸಂಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೆರೆ, ಕಟ್ಟೆಗಳಿಗೆ ನೀರನ್ನು ತುಂಬಿಸುವ ನಿಟ್ಟಿನಲ್ಲಿ ಜು.8ರಿಂದ ವಿಶ್ವೇಶ್ವರಯ್ಯ ನಾಲೆಗೆ (ವಿಸಿ ನಾಲೆ) ನೀರು ಹರಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ಕೃಷ್ಣರಾಜಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶದ ನೀರಾವರಿ ಸಲಹಾ ಸಮಿತಿ ಸಭೆಯ ನಂತರ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಕಳೆದ 10 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಅಣೆಕಟ್ಟು 100 ಅಡಿ ತುಂಬಿದೆ. ಸಾಮಾನ್ಯವಾಗಿ ಪ್ರತಿವರ್ಷ ಕೆಆರ್ ಎಸ್ ಅಣೆಕಟ್ಟಿನಿಂದ ಜುಲೈ ಎರಡನೇ ವಾರದಿಂದ ವಿ.ಸಿ.ನಾಲೆಗೆ ನೀರು ಹರಿಸಲಾಗುತ್ತಿತ್ತು. ಆದರೆ, ಈ ಬಾರಿ ಮಾರ್ಚ್ ನಲ್ಲಿ ನಾಲೆಗೆ ನೀರು  ಹರಿಸದ ಹಿನ್ನಲೆಯಲ್ಲಿ ಜುಲೈ 8 ರ ಸಂಜೆಯಿಂದ ಮುಂದಿನ 15 ದಿನಗಳ ಕಾಲ ವಿ.ಸಿ.ನಾಲೆಗೆ ನೀರು ಹರಿಸಲಾಗುವುದು ಎಂದು ತಿಳಿಸಿದರು.

ಕೆಆರ್‌ಎಸ್‌ಗೆ ಒಳ ಹರಿವು ಹೆಚ್ಚಳ, 100 ಅಡಿ ದಾಟಿದ್ದಕ್ಕೆ ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ!

ಇದು ಕೇವಲ ಕೆರೆ ಕಟ್ಟೆ ತುಂಬಿಸಲು ಹಾಗು ಜಾನುವಾರುಗಳ ಹಿತದೃಷ್ಟಿಯಿಂದ ನಾಲೆಗೆ ನೀರು ಹರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಮುಂದಿನ 10 ದಿನಗಲ ನಂತರ ಮುಂಗಾರು ಮಳೆಯ ಪರಿಸ್ಥಿತಿ ಹಾಗು ಕೆಆರ್ ಎಸ್ ಅಣೆಕಟ್ಟಿನ ಒಳಹರಿವು ಗಮನಿಸಿಕೊಂಡು ರೈತರ ಬೆಳೆಗಳಿಗೂ ನೀರು ಹರಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು. ವಿ.ಸಿ.ನಾಲೆಯ 36 ಕಿಮೀ ಕಾಮಗಾರಿ ಈಗಾಗಲೇ ಮುಕ್ತಾಯವಾಗಿದ್ದು, ಬಾಕಿ 16 ಕಿಮೀ ಕಾಮಗಾರಿ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಿದ ನಂತರ ಮುಕ್ತಾಯಗೊಳಿಸಲಾಗುವುದು ಎಂದು ಹೇಳಿದರು.

ಮಂಡ್ಯದ ಜಿಲ್ಲೆಯ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಗೆ ಟ್ರಯಲ್ ಬ್ಲಾಸ್ಟ್‌ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಹೈಕೋರ್ಟ್ ಅಡ್ವೋಕೆಟ್ ಜನರಲ್ ಜೊತೆ ಚರ್ಚೆ ಮಾಡಿ ಜುಲೈ 15 ರೊಳಗೆ ತೀರ್ಮಾನ ಕೈಗೊಳ್ಳಲಾಗುವುದು.ಇನ್ನು ಮಂಡ್ಯದಲ್ಲಿ ಟ್ರಯಲ್ ಬ್ಲಾಸ್ಟ್ ಸಾಧಕ ಬಾದಕ ಬಗ್ಗೆ ರೈತರ ಜೊತೆ ಚರ್ಚೆ ನಡೆಸಿರುವುದಾಗಿ ಚಲುವರಾಯಸ್ವಾಮಿ ಹೇಳಿದರು‌‌.

ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಫೋನ್ ವಾಲ್‌ಪೇಪರ್‌ನಲ್ಲಿರುವ ಕರೋಲಿ ಬಾಬಾ ಯಾರು ಗೊತ್ತಾ?

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ:

  • ಗರಿಷ್ಠ ಮಟ್ಟ - 124.80 ಅಡಿ.
  • ಇಂದಿನ ಮಟ್ಟ - 101.50 ಅಡಿ.
  • ಗರಿಷ್ಠ ಸಾಂದ್ರತೆ - 49.452 ಟಿಎಂಸಿ
  • ಇಂದಿನ ಸಾಂದ್ರತೆ - 24.0010 ಟಿಎಂಸಿ
  • ಒಳ ಹರಿವು - 9,065 ಕ್ಯೂಸೆಕ್
  • ಹೊರ ಹರಿವು - 563 ಕ್ಯೂಸೆಕ್
Latest Videos
Follow Us:
Download App:
  • android
  • ios