ಬೆಂಗಳೂರಿನಲ್ಲಿ ವೀಕೆಂಡ್ ಕರ್ಪ್ಯೂ ಓಕೆ, ರಾಜ್ಯದೆಲ್ಲೆಡೆ ಯಾಕೆ?: ಈಶ್ವರಪ್ಪ ಪ್ರಶ್ನೆ

* ರಾಜ್ಯದಲ್ಲಿ ಕೊರೋನಾ ಹೆಚ್ಚಳ
* ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ ಸರ್ಕಾರ
* ರಾಜ್ಯದೆಲ್ಲಡೆ ವೀಕೆಂಡ್ ಕರ್ಫ್ಯೂಗೆ ಅಸಮಾಧಾನ ವ್ಯಕ್ತಪಡಿಸಿದ ಈಶ್ವರಪ್ಪ

KS Eshwarappa oppress to weekend Curfew In Karnataka rbj

ಶಿವಮೊಗ್ಗ, (ಜ..05): ಕೋವಿಡ್ ಹೆಚ್ಚಳ ಹಿನ್ನೆಲೆ ವೀಕೆಂಡ್ ಕರ್ಪ್ಯೂ ( weekend Curfew) ಜಾರಿಗೊಳಿಸಿರುವ ಸರ್ಕಾರದ ನಿರ್ಧಾರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಬುಧವಾರ ಅಸಮಾಧಾನ ಹೊರ ಹಾಕಿದ್ದಾರೆ.

ಶಿವಮೊಗ್ಗದಲ್ಲಿ(Shivamogga) ಇಂದು(ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೋನಾ ಜಾಸ್ತಿ ಇರುವುದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ.ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ. ಉದಾಹರಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ಅಷ್ಟಿಲ್ಲ.ಕೆಲವೆಡೆ 2-3-4-5 ಈ ರೀತಿ ಇದೆ. ಜಾಸ್ತಿ ಅಂದರೆ 10 ರವರೆಗೆ ಇದೆ. ಜಾಸ್ತಿ ಇದೆ ಅಂದುಕೊಂಡು ಇಡೀ ರಾಜ್ಯಕ್ಕೆ ರೂಲ್ಸ್ ತರುವುದು ಸರಿಯೇ ಎಂದು ಅನೇಕರು ನನಗೆ ಪ್ರಶ್ನೆ ಮಾಡುತ್ತಿದ್ದಾರೆ ಎಂದರು.

Weekend Curfew ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ, ಬೆಂಗ್ಳೂರಲ್ಲಿ 2 ವಾರ ಶಾಲಾ-ಕಾಲೇಜು ಬಂದ್

ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಎಲ್ಲಾ ಕಡೆಯಿಂದ ನನಗೆ ಪೋನ್ ಮಾಡುತ್ತಿದ್ದಾರೆ.ಬೆಂಗಳೂರಿನಲ್ಲಿ ಬಿಗಿ ಮಾಡಿ ನಾವು ಸಹಕಾರ ಕೊಡುತ್ತೇವೆ. ನಾವು ಯಾವುದೇ ಖರೀದಿಗೂ ಬೆಂಗಳೂರಿಗೆ ಹೋಗುವುದಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ, ಶಾಲೆಗಳಿಗೆ ಹೋಗುವುದಕ್ಕೆ ಅವಕಾಶ ಮಾಡಿಕೊಡಿ ಎಂದು ಕೇಳುತ್ತಿದ್ದಾರೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣ ಮಾಡುವುದು ಎಲ್ಲರ ಕರ್ತವ್ಯ.ಅಷ್ಟು ಇಲ್ಲದಿರುವ ಸಂದರ್ಭದಲ್ಲಿ ನಮ್ಮ ಮೇಲೆ ಹೇರಿದರೆ ನಮ್ಮ ವ್ಯವಹಾರಕ್ಕೆ ತೊಂದರೆ ಆಗುತ್ತದೆ.ಇದಕ್ಕೆ ಮುಂಜಾಗ್ರತೆ ತೆಗೆದುಕೊಳ್ಳುತ್ತಿದ್ದೇವೆ. ಖಂಡಿತಾ ಮಾಸ್ಕ್ ಧರಿಸುತ್ತೇವೆ. ಸ್ಯಾನಿಟೈಸರ್ ಬಳಸುತ್ತೇವೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತೇವೆ. ದಯವಿಟ್ಟು ನಮಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ನಾಳೆ (ಗುರುವಾರ) ಸಚಿವ ಸಂಪುಟ ಸಭೆ ನಡೆಯಲಿದೆ, ಮುಖ್ಯಮಂತ್ರಿ ಗಳು ಹಾಗು ಉಳಿದವರ ಜೊತೆ ಈ ಬಗ್ಗೆ ಮಾತನಾಡುತ್ತೇನೆ. ಬೆಂಗಳೂರಿನಲ್ಲಿ ಬಿಗಿ ಮಾಡಬೇಕು. ಗಡಿಗಳಲ್ಲಿ ಬಿಗಿ ಮಾಡಲೇ ಬೇಕು. ಇಂತಹ ಸಲಹೆಯನ್ನು ಸಚಿವ ಸಂಪುಟದಲ್ಲಿ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಆಟೋ ರಿಕ್ಷಾ ಡ್ರೈವರ್, ಹಮಾಲರು ಎಲ್ಲಿ ಹೋಗಬೇಕು ಅವರ ಜೀವನಕ್ಕೆ? ಕೂಲಿ ಕಾರ್ಮಿಕರು, ಟೈಲರ್ ಎಲ್ಲರಿಗು ತೊಂದರೆ ಆಗುತ್ತದೆ. ರಾಜ್ಯದ ಜನರ ಅಭಿಪ್ರಾಯವನ್ನು ಸಚಿವ ಸಂಪುಟದಲ್ಲಿ ಸಿಎಂ ಮುಂದೆ ಇಡುತ್ತೇನೆ ಎಂದರು.

ಕಠಿಣ ರೂಲ್ಸ್
* ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಪ್ರಕಾರ ಇಡೀ ರಾಜ್ಯದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.

* ಎಲ್ಲಾ ಕಛೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ವಾರದ 5 ದಿನಗಳಲ್ಲಿ ಮಾತ್ರ ಕಾರ್ಯ ನಿರ್ವಹಿಸುತ್ತವೆ.

* ಸರ್ಕಾರಿ ಸಚಿವಾಲಯವು ಕಾರ್ಯದರ್ಶಿ ಶ್ರೇಣಿಗಿಂತ ಕೆಳಗಿರುವ ಅಧಿಕಾರಿಗಳಲ್ಲಿ ಶೇ.50% ಕಾರ್ಯ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತದೆ.

* ರಾಜ್ಯದಲ್ಲಿ ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5 ರವರೆಗೆ ವಾರಾಂತ್ಯದ ಕರ್ಫ್ಯೂ ಇರುತ್ತದೆ.

* BMRCL ಸೇರಿದಂತೆ ಸಾರ್ವಜನಿಕ ಸಾರಿಗೆಯು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕರ ನಿರ್ದೇಶನಗಳ ಪ್ರಕಾರ ಕಾರ್ಯನಿರ್ವಹಿಸುತ್ತದೆ. ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ತುರ್ತು ಉದ್ದೇಶಗಳಿಗಾಗಿ ಜನರ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತವೆ.

* ಬೆಂಗಳೂರು ನಗರ ಜಿಲ್ಲೆಯಲ್ಲಿ ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್ ಹೊರತುಪಡಿಸಿ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳು 06-01-2022 ರಿಂದ ಜಾರಿಗೆ ಬರುವಂತೆ 10, 11 ಮತ್ತು 12 ನೇ ತರಗತಿಗಳನ್ನು ಹೊರತುಪಡಿಸಿ ಎಲ್ಲಾ ಶಾಲಾ-ಕಾಲೇಜುಗಳು ಮುಚ್ಚಲ್ಪಡುತ್ತವೆ.

* ಪಬ್‌ಗಳು / ಕ್ಲಬ್‌ಗಳು / ರೆಸ್ಟೋರೆಂಟ್‌ಗಳು / ಬಾರ್‌ಗಳು / ಹೋಟೆಲ್‌ಗಳು/ ಹೋಟೆಲ್‌ಗಳಲ್ಲಿ ತಿನ್ನುವ ಸ್ಥಳಗಳು ಇತ್ಯಾದಿ, ಆಸನ ಸಾಮರ್ಥ್ಯದ ಶೇ 50ರಷ್ಟು ಕೊವಿಡ್ ಸೂಕ್ತ ನಡವಳಿಕೆಗೆ ಕಟ್ಟುನಿಟ್ಟಾಗಿ ಬದ್ಧವಾಗಿರುತ್ತವೆ. ಅಂತಹ ಸ್ಥಳಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ನಿರ್ಬಂಧಿಸಲಾಗುತ್ತದೆ.

* ಸಿನಿಮಾ ಹಾಲ್‌ಗಳು / ಮಲ್ಟಿಪ್ಲೆಕ್ಸ್‌ಗಳು / ಥಿಯೇಟರ್‌ಗಳು / ರಂಗಮಂದಿರಗಳು / ಆಡಿಟೋರಿಯಂ ಮತ್ತು ಅದರ ಆಸನ ಸಾಮರ್ಥ್ಯದ 50% ರಷ್ಟು ಕಾರ್ಯನಿರ್ವಹಿಸಲು ಕೋವಿಡ್ ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಮತ್ತು ಅಂತಹ ಸ್ಥಳಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ನಿರ್ಬಂಧಿಸಲಾಗುತ್ತದೆ.

* ಕೋವಿಡ್ 19 ಸೂಕ್ತ ನಡವಳಿಕೆ ಮತ್ತು ರಾಜ್ಯ ಸರ್ಕಾರ ಹೊರಡಿಸಿರುವ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತೆರೆದ ಸ್ಥಳಗಳಲ್ಲಿ 200 ಜನರನ್ನು ಮತ್ತು ಮುಚ್ಚಿದ ಸ್ಥಳಗಳಲ್ಲಿ 100 ಜನರನ್ನು ಒಳಗೊಳ್ಳದಂತೆ ವಿವಾಹ ಕಾರ್ಯಗಳನ್ನು ನಡೆಸಲು ಅನುಮತಿಸಲಾಗಿದೆ.

* ಧಾರ್ಮಿಕ ಸ್ಥಳಗಳನ್ನು ದರ್ಶನಕ್ಕೆ ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಯಾವುದೇ ಸೇವೆ ಇತ್ಯಾದಿಗಳನ್ನು ಅನುಮತಿಸಲಾಗುವುದಿಲ್ಲ. ಯಾವುದೇ ಸಮಯದಲ್ಲಿ ಸಂಪೂರ್ಣವಾಗಿ ಲಸಿಕೆಯನ್ನು ಪಡೆದ 50 ವ್ಯಕ್ತಿಗಳಿಗೆ ಮಾತ್ರ ಅನುಮತಿ

* ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಎಲ್ಲಾ ಅದ್ವಿತೀಯ ಅಂಗಡಿಗಳು ಮತ್ತು ಸಂಸ್ಥೆಗಳು ವಾರದ ದಿನಗಳಲ್ಲಿ ಎಂದಿನಂತೆ ಕಾರ್ಯನಿರ್ವಹಿಸುತ್ತವೆ.

Latest Videos
Follow Us:
Download App:
  • android
  • ios